ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಬಾಲಕಾರ್ಮಿಕರ ನಿರ್ಮೂಲನೆ ಯೋಜನೆ ಇಲಾಖೆಯ ವತಿಯಿಂದ ಬಂದಂತಹ ಅಧಿಕಾರಿಗಳ ತಂಡವು ಹನೂರು ಪಟ್ಟಣದ ಆಟೋಮೊಬೈಲ್ಸ್, ಗ್ಯಾರೇಜ್,ಬಾರ್,ಅಂಗಡಿ ಮುಕ್ಕಟ್ಟು ಮುಂತಾದ ಜಾಗಗಳಲ್ಲಿ ಬಾಲಕಾರ್ಮಿಕರು ಇರಬಹುದು ಎಂದು ತಪಾಸಣೆ ನಡೆಸಿದರು.ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಆದ ಪ್ರಸಾದ್ ರವರು ಮಾತನಾಡಿ ಬಾಲ್ಯವ್ಯವಸ್ಥೆಯು ಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕವಾಗಿ ನೈತಿಕವಾಗಿ ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಹಾಗೂ ಸರ್ವಾಂಗೀಣ ಪ್ರಗತಿಯ ಅವಕಾಶಗಳನ್ನು ತಡೆಗಟ್ಟುತ್ತದೆ ಪ್ರತಿಯೊಂದು ಮಗುವಿಗೂ ಶಿಕ್ಷಣ ಕಡ್ಡಾಯವಾಗಿ ನೀಡಬೇಕು 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ತೆಗೆದುಕೊಂಡು ಕೆಲಸ ಮಾಡಿಸುವುದು ಕಾನೂನು ಬಾಹಿರ ಅಪರಾಧವಾಗಿದೆ . ಮಗು ಶಿಕ್ಷಣವನ್ನು ಹೊರತುಪಡಿಸಿ ಯಾವುದೇ ಅಂಗಡಿ ಮುಂಗಟ್ಟಿನಲ್ಲಿ ಕೆಲಸ ಮಾಡುತ್ತಿದ್ದರೆ ಅಂತವರ ಬಗ್ಗೆ ಸಹಾಯವಾಣಿ ಸಂಖ್ಯೆ(1098) ಮಾಹಿತಿಯನ್ನು ನೀಡಬಹುದು ಎಂಬುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಅಧಿಕಾರಿಗಳಾದ ಮಹೇಶ್ ಕಾರ್ಮಿಕ ಇಲಾಖೆಯ ಸಿಬ್ಬಂದಿ,ಸಿದ್ದ ಶೆಟ್ಟಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಚಂದ್ರಶೇಖರ್ ಪೊಲೀಸ್ ಸಿಬ್ಬಂದಿಯವರು ಹಾಜರಿದ್ದರು.
ವರದಿ:ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.