ಹನೂರು:ಪ್ರಸಿದ್ದ ಯಾತ್ರಾ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಮಾದಪ್ಪನ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವಂತೆ ಶಾಸಕರಾದ ಶ್ರೀ ಎಂ ಆರ್ ಮಂಜುನಾಥ್ ಸೂಚನೆ ನೀಡಿ ಮಾತನಾಡಿದ ಅವರು
ರಾಜ್ಯದ ಧಾರ್ಮಿಕ ಕ್ಷೇತ್ರದಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟವು ಈಗಾಗಲೆ ಪ್ರಸಿದ್ಧಿ ಪಡೆದಿದೆ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದರು ಅಲ್ಲದೆ 108 ಅಡಿ ಎತ್ತರದ ಮಹದೇಶ್ವರನ ವಿಗ್ರಹವು ಉದ್ಘಾಟನೆಗೊಂಡು ಹಲವಾರು ತಿಂಗಳುಗಳ ಕಳೆದಿದೆ ಆದರೆ ಉಳಿದಿರುವ ಕಾಮಗಾರಿಗಳಿಂದಾಗಿ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತರಿಗೆ ವೀಕ್ಷಣೆ ಮಾಡಲು ಅವಕಾಶ ಇಲ್ಲದೆ ಇರುವುದರಿಂದ ಕೂಡಲೇ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಭಕ್ತರ ಅನುಕೂಲಕ್ಕಾಗಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು ನಂತರ 512 ಸಂಖ್ಯೆಗಳ ಕೊಠಡಿಗಳ ಕಾಮಗಾರಿಯನ್ನು ಸಹ ಪರಿಶೀಲನೆ ನಡೆಸಿ ರಾಜ್ಯದ ನಾನಾ ಭಾಗಗಳಿಂದ ಜಾತ್ರೆ ಹಾಗೂ ವಿಶೇಷ ಅಮಾವಾಸ್ಯೆ ಹುಣ್ಣಿಮೆ ದಿನಗಳಲ್ಲಿ ಲಕ್ಷಾಂತರ ಭಕ್ತರು ಬಂದು ಹೋಗುವ ಸ್ಥಳದಲ್ಲಿ ಕೊಠಡಿಗಳ ಕೊರತೆ ಇರುವುದರಿಂದ ಕೂಡಲೇ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು ನಂತರ ದರ್ಶನದ ಸಾಲಿನ ಕಾಮಗಾರಿ ಕೊಠಡಿಯನ್ನು ಸಹ ಪರಿಶೀಲನೆ ನಡೆಸಿ ವಿಕ್ಷೀಸಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ವಿಶ್ರಾಂತಿ ಪಡೆದು ಮಾದಪ್ಪನ ದರ್ಶನ ಪಡೆಯಲು ಭಕ್ತರ ಅನುಕೂಲಕ್ಕಾಗಿ ಮಾಡುತ್ತಿರುವ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.ಜಿಲ್ಲಾಧಿಕಾರಿ ಶಿಲ್ಪನಾಗ್,ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಗೀತಾ ಹುಡೇದ್,ಸಾಲೂರು ಮಠದ ಪೀಠಾಧಿಪತಿಗಳಾದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ,ಇಂಜನಿಯರ್ ಗಳಾದ ಸೆಲ್ವ ಗಣಪತಿ, ಕುಮಾರ್ ಸೇರಿದಂತೆ ದೇವಾಲಯದ ಸಿಬ್ಬಂದಿ ವರ್ಗ ಹಾಜರಿದ್ದರು.
ವರದಿ ಉಸ್ಮಾನ್ ಖಾನ್
