ಕಲಬುರಗಿ:ಆಳಂದ ತಾಲೂಕು ಮುಖ್ಯೋಪಾಧ್ಯಾಯರ ಸಂಘದ ಪದಾಧಿಕಾರಿಗಳ ಆಯ್ಕೆಯನ್ನು ಶನಿವಾರ ಪಟ್ಟಣದ ಲೋಕನಾಯಕ ಜಯಪ್ರಕಾಶ ನಾರಾಯಣ ಪ್ರೌಢಶಾಲೆಯಲ್ಲಿ ಜಿಲ್ಲಾ ಸಂಘದ ಅಧ್ಯಕ್ಷರಾದ ಮರೆಪ್ಪ ಬಸವಪಟ್ಟಣ,ಕಾರ್ಯದರ್ಶಿ ಮಹೇಶ್ ಹಿರೇಮಠ,ಖಜಾಂಚಿ ಅಮರೇಶ್ವರ ಶೀಳಿ ಕಲಬುರಗಿ ದಕ್ಷಿಣ ತಾಲೂಕಿನ ಪ್ರಧಾನ ಕಾರ್ಯದರ್ಶಿಗಳಾದ ವಿಜಯಕುಮಾರ ಪಾಟೀಲ ಅವರ ಸಮ್ಮುಖದಲ್ಲಿ ಸಭೆ ಕರೆದು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಮರೆಪ್ಪ ಬಡಿಗೇರ,ಪ್ರಧಾನ ಕಾರ್ಯದರ್ಶಿಯಾಗಿ ಎಲ್.ಎಸ್.ಬೀದಿ, ಉಪಾಧ್ಯಕ್ಷರಾಗಿ ಚಂದ್ರಕಾಂತ ಕಲಶೆಟ್ಟಿ, ಸಹಕಾರ್ಯದರ್ಶಿಯಾಗಿ ಸೋಮನಾಥ ಜಳಕೋಟಿ, ಖಜಾಂಚಿಯಾಗಿ ಅಣ್ಣಪ್ಪ ಹಾದಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು ಮಾತನಾಡುತ್ತಾ ಮಕ್ಕಳ ಕಲಿಕಾ ಮಟ್ಟ ಹೆಚ್ಚಿಸುತ್ತಾ ಶೈಕ್ಷಣಿಕ ಸುಧಾರಣೆ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕಾಗಿ ವಿಶೇಷ ತರಗತಿಗಳು ಹಾಗೂ ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.
ವರದಿ; ಅಪ್ಪಾರಾಯ ಬಡಿಗೇರ