ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಐಎಎಸ್ ಕನಸು ಭಗ್ನ:ಜೀವನದಲ್ಲಿ ಜಿಗುಪ್ಸೆ:ಬ್ಯಾಂಕ್ ಮ್ಯಾನೇಜರ್ ಶೃತಿ ನೇಣಿಗೆ ಶರಣು

ಚಾಮರಾಜನಗರ:ಐಎಎಸ್ ಮಾಡುವ ಕನಸು ನನಸಾಗದ ಹಿನ್ನೆಲೆ ಹಾಗೂ ಜೀವನದಲ್ಲಿ ಜಿಗುಪ್ಪೆ ಗೊಂಡ ಕೊಳ್ಳೇಗಾಲ ಮೂಲದ ಬ್ಯಾಂಕ್ ಮ್ಯಾನೇಜರ್ ಮಂಡ್ಯದಲ್ಲಿ ನೇಣಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.ಕಾವೇರಿ ಗ್ರಾಮೀಣ ಬ್ಯಾಂಕ್ ನ ಪ್ರಾದೇಶಿಕ ಕಚೇರಿಯ ವ್ಯವಸ್ಥಾಪಕಿ ಶೃತಿ (30) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಡ್ಯದ ವಿನಾಯಕ ಬಡಾವಣೆಯ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ.ಐಎಎಸ್ ಕನಸು ಮತ್ತು ಜೀವನದ ವೈಫಲ್ಯ ಸಾವಿಗೆ ಕಾರಣ ಎಂದು ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ.
ಕೊಳ್ಳೇಗಾಲದ ವರದಿಗಾರ ಮಲ್ಲಪ್ಪ
ಯಡದೊರೆಯವರ ಪುತ್ರಿಯಾದ ಶೃತಿ,ಕಾವೇರಿ ಗ್ರಾಮೀಣ ಬ್ಯಾಂಕ್ ನ ಉದ್ಯೋಗಿಯಾಗಿ ನೇಮಕ ಗೊಂಡು ಚಿಕ್ಕಮಗಳೂರಿನ ಶಾಖೆಯಲ್ಲಿ ಕಳೆದ ಏಳು ವರ್ಷ ಕಾರ್ಯನಿರ್ವಹಿಸಿ ಮಂಡ್ಯದ ಪ್ರಾದೇಶಿಕ ಕಚೇರಿಗೆ ಎರಡು ತಿಂಗಳ ಹಿಂದೆ ಬಂದಿದ್ದರು.
ಭಾನುವಾರ ರಾತ್ರಿ ಏಳರ ಸಮಯದಲ್ಲಿ ತಂದೆ ಮಲ್ಲಪ್ಪರಿಗೆ ಕರೆ ಮಾಡಿದ ಶೃತಿ ನಾನು ದೇವರ ಬಳಿ ಹೋಗುತ್ತಿದ್ದೇನೆ,ನನ್ನನ್ನು ಕ್ಷಮಿಸಿ ಎಂದು ಹೇಳಿ ಕರೆ ಕಡಿತ ಮಾಡಿದ್ದಾರೆ,ತಕ್ಷಣ ಮತ್ತೆ ಅವರು ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿದೆ.
ಮಂಡ್ಯದಲ್ಲಿರುವ ಸಂಬಂಧಿಕರಿಗೆ ಮಲ್ಲಪ್ಪ ವಿಚಾರ ತಿಳಿಸಿದ್ದು ಮನೆಯ ಬಳಿ ಹೋಗಿ ನೋಡಿದಾಗ ಅಷ್ಟರಲ್ಲಿ ನೇಣು ಬಿಗಿದುಕೊಂಡಿದ್ದರು.
ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿರುವ ಶೃತಿ ಐಎಎಸ್ ಮಾಡಬೇಕೆಂಬ ಕನಸು ನನಸಾಗಲಿಲ್ಲ, ಜೊತೆಗೆ ಜೀವನದಲ್ಲಿಯೂ ನಾನು ವೈಫಲ್ಯವನ್ನೂ ಕಂಡಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ