ಕಲಬುರಗಿ:ಜೇವರ್ಗಿ ತಾಲೂಕಿನ ಗೌನಳ್ಳಿ ಗ್ರಾಮದಲ್ಲಿ ಸಾಲಗಾರನ ಕಿರುಕುಳ ತಾಳಲಾರದೇ ವ್ಯಕ್ತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,ನಗರದಲ್ಲಿ ದಲಿತ ಮುಖಂಡ ಅರ್ಜುನ್ ಭದ್ರೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ,ಗೌನಳ್ಳಿ ಗ್ರಾಮದ ಬಸವರಾಜ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದ ಸಾಲ ಕೊಟ್ಟ ವ್ಯಕ್ತಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿದರು.ಆರೋಪಿಗಳಾದ ಶೇಖರಪ್ಪ ಹಾಗೂ ಜಟ್ಟೆಪ್ಪ ಸೇರಿದಂತೆ ಒಟ್ಟು ಒಂಬತ್ತು ಜನರ ವಿರುದ್ಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇವೆ.ಬಸವರಾಜನಿಗೆ ಶೇಖರಪ್ಪ 5 ಸಾವಿರ ರೂಪಾಯಿ ಬಡ್ಡಿಯ ರೂಪದಲ್ಲಿ ಕೈ ಸಾಲ ನೀಡಿದ್ದು,ಒಂದೇ ವರ್ಷದಲ್ಲಿ ಅಸಲು ಮತ್ತು ಬಡ್ಡಿ ಸಹಿತ 43 ಸಾವಿರ ರೂಪಾಯಿ ಕೊಡಬೇಕು ಎಂದು ಪ್ರತಿ ದಿನ ಕಿರುಕುಳ ನೀಡುತ್ತಿದ್ದ.ಸಾಲಗಾರರ ಕಿರುಕುಳಕ್ಕೆ ಬೇಸತ್ತು ಬಸವರಾಜ್ ಡೆತ್ ನೋಟ್ ಬರೆದಿಟ್ಟು ನನ್ನ ಸಾವಿಗೆ ಶೇಖರಪ್ಪ ಕಾರಣನೆಂದು ಬರೆದು ಆತ್ಮಹತ್ಯೆ ಮಾಡಿ ಕೊಂಡಿರುತ್ತಾನೆ ಜೇವರ್ಗಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಧಿಕಾರಿಗಳು ಮರಣೋತ್ತರ ಪರೀಕ್ಷೆ ಮಾಡಿ ಬಸವರಾಜ ಹಾವು ಕಚ್ಚಿ ಸಾವನಪ್ಪಿದ್ದಾನೆ ಎಂದು ವ್ಯವಸ್ಥಿತವಾಗಿ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ್ದಾರೆ ಈ ಪ್ರಕರಣದಲ್ಲಿ ತಾಲೂಕ ಕೆಲವು ಅಧಿಕಾರಿಗಳು ಶಾಮೀಲಾಗಿ ಸುಳ್ಳು ಎಫ್.ಐ.ಆರ್ ಕೇಸು ದಾಖಲು ಮಾಡಿದ್ದಾರೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡಬೇಕು ಎಂದು ಮೃತನ ಕುಟುಂಬಸ್ಥರು ಮನವಿ ಮಾಡಿದರು.
ಈ ಪ್ರಕರಣಕ್ಕೆ ಸಂಬಂಧಿಸಿದ ಎಫ್.ಐ.ಆರ್ ರದ್ದುಪಡಿಸಿ ಪರಿಶಿಷ್ಟ ಜಾತಿ ದೌರ್ಜನ್ಯದ ಅಡಿಯಲ್ಲಿ ಸಾಲ ಕೊಟ್ಟ ವ್ಯಕ್ತಿ ಶೇಖರಪ್ಪನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ವರದಿ ರಾಜಶೇಖರ ಮಾಲಿ ಪಾಟೀಲ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.