ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಿರುಗುಪ್ಪ ತಾಲೂಕು ಘಟಕದ ವತಿಯಿಂದ ಇಂದು ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಬಿ.ಎಂ.ನಾಗರಾಜ ಇವರಿಗೆ ಸಿರಗುಪ್ಪ ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಪದಾಧಿಕಾರಿಗಳು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಿರುಗುಪ್ಪ ತಾಲೂಕ ದಂಡಾಧಿಕಾರಿಗಳಾದ ಹೆಚ್.ವಿಶ್ವನಾಥ್ ಅವರು, ಸರ್ಕಾರಿ ನೌಕರ ಸಂಘದ ರಾಜ್ಯ ಸಂಘಟನಾ ಜಂಟಿ ಕಾರ್ಯದರ್ಶಿಗಳಾದ ಅಲ್ಲ ಬಕಾಶ್,ಜಿಲ್ಲಾಧ್ಯಕ್ಷರಾದ ಶಿವಾಜಿ ರಾವ್,ತಾಲೂಕು ನೌಕರರ ಸಂಘದ ಅಧ್ಯಕ್ಷರಾದ ಲಿಂಗಾರೆಡ್ಡಿ ಅವರು,ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು,ಎಲ್ಲಾ ಇಲಾಖೆಯ ಅಧಿಕಾರಿಗಳು,ಸಿಬ್ಬಂದಿ ವರ್ಗದವರು
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ-ರಾಜಶೇಖರ ಮಾಲಿ ಪಾಟೀಲ್
