ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮದ ಶ್ರೀ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಸಾಂಸ್ಕೃತಿಕ ಮತ್ತು ಶಾರೀರಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನೆರವೇರಿಸಲಾಯಿತು.ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಪರಮ ಪೂಜ್ಯರಾದ
ಷಟ್ ಸ್ಥಲ ಬ್ರಹ್ಮ ಶ್ರೀಸಿದ್ದರಾಮ ಶಿವಾಚಾರ್ಯರು ಗುರು ಮರುಳಾರಾಧ್ಯ ಸಂಸ್ಥಾನ ಹಿರೇಮಠ ಕಲಕೇರಿ ಅವರು ವಹಿಸಿಕೊಂಡಿದ್ದರು.ಅಧ್ಯಕ್ಷತೆಯನ್ನು ವಹಿಸಿದ್ದ ಸಿ.ಎಸ್. ಹಿರೇಮಠ ಶ್ರೀ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು ವಹಿಸಿಕೊಂಡಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ದೇವರ ಹಿಪ್ಪರಗಿ ಮತಕ್ಷೇತ್ರದ ಜನಪ್ರೀಯ ಶಾಸಕರಾದ ಶ್ರೀ ರಾಜುಗೌಡ ಪಾಟೀಲ ಕುದರಿ ಸಾಲವಾಡಗಿ ಹಾಗೂ ಸಿಂದಗಿ ಮತಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಮನಗೂಳಿಯವರು ನೆರವೇರಿಸಿದರು. ಸನ್ಮಾನಿತರಾಗಿ ಕಲಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜ್ಅಮ್ಮದ ಸಿರಸಗಿ,ಉಪಾಧ್ಯಕ್ಷರಾದ ಪರಶುರಾಮ ಬೇಡರ,ಅವರು ಈ ಸಭೆಗೆ ಆಗಮಿಸಿದ್ದರು ಅದೇ ರೀತಿ ಈ ಸಂಸ್ಥೆಯ ಅಧ್ಯಕ್ಷರು ಮತ್ತು ಸದಸ್ಯರು ಇನ್ನೂ ಹಲವಾರು ಮುಖಂಡರು ಈ ಕಾರ್ಯ ಕ್ರಮದಲ್ಲಿ ಹಾಜರಿದ್ದರು ಸಾಧನೆ ಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು ಮತ್ತು ವಿಧ್ಯಾರ್ಥಿಗಳು ಹಲವಾರು ಹಿರಿಯ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ