ಭದ್ರಾವತಿ : ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸೆಪ್ಟೆಂಬರ್ ಬುಧವಾರ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಸೆಪ್ಟೆಂಬರ್ ಆರರಂದು ಸಂಜೆ 4 ಗಂಟೆಗೆ ತಾಲೂಕು ಕಚೇರಿ ರಸ್ತೆಯ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಶಾಸಕ ಶ್ರೀ ಬಿಕೆ ಸಂಗಮೇಶ್ವರರವರಿಗೆ ಹಾಗೂ ತಾಲ್ಲೂಕು ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ದಾನಿಗಳಿಗೆ ಅಭಿನಂದಿಸಲಾಗುವುದು. ಇದೇ ಸಂದರ್ಭದಲ್ಲಿ 2023ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಕನ್ನಡ ಪ್ರಥಮ ಭಾಷೆಯಲ್ಲಿ 125ಕ್ಕೆ 125 ಅಂಕಗಳಿಸಿದ 46 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸುವರು. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೊಡ್ಲು ಹೆಣ್ಣಯ್ಯ ಕಾರ್ಯಕ್ರಮದ ಅಧ್ಯಕ್ಷತೆಯಲ್ಲಿ ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಪೌರಾಯುಕ್ತ ಎಂ ಮನು ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ ಕೆ ನಾಗೇಂದ್ರಪ್ಪ, ಎಮರಿಟಸ್ ಪ್ರೊಫೆಸರ್ ಡಾಕ್ಟರ್ ವಿಜಯ ದೇವಿ, ಸಮಾಜ ಸೇವಕ ಸಿ ಮಹೇಶ್ ಕುಮಾರ್, ಸತ್ಯಸಾಯಿ ರಾಜ್ಯ ಸಂಚಾಲಕ ಪ್ರಭಾಕರ್ ಬೀರಯ್ಯ, ಉದ್ಯಮಿ ಬಿ ಕೆ ಜಗನ್ನಾಥ್ ಉಪಸ್ಥಿತಿಯಲ್ಲಿ ಉದ್ಯಮಿಗಳಾದ ಕೆ ಹೆಚ್ ತೀರ್ಥಯ್ಯ, ಮಾದಪ್ಪ, ಸಮಾಜ ಸೇವಕ ಜಿ ಸುರೇಶಯ್ಯ, ಹೋಟೆಲ್ ಉದ್ಯಮಿ ಎಂ ಎನ್ ಸುಧೀರ್ ನಂಬಿಯಾರ್, ಬಿ ಎಸ್ ಭಾಗ್ಯಲಕ್ಷ್ಮಿ ಕೇಶವಪುರ, ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಎಂ ಆರ್ ರೇವಣಪ್ಪ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂಎಸ್ ಸುಧಾಮಣಿ ಪಾಲ್ಗೊಳ್ಳಲಿದ್ದಾರೆ.
ಈ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಭದ್ರಾವತಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಮತ್ತು ಸದಸ್ಯರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.