ಹನೂರು:ಪಟ್ಟಣದಲ್ಲಿ ನಡೆಯುತ್ತಿರುವ ಕೆಶಿಪ್ ರಸ್ತೆ ಅಗಲೀಕರಣ ಮತ್ತು ರಸ್ತೆ ಬದಿಯಲ್ಲಿರುವ ಅಂಗಡಿ ಮಾಲೀಕರು ತಮ್ಮ ಮಳಿಗೆಗಳಲ್ಲಿರುವ ವಸ್ತುಗಳನ್ನು ತೆರವುಗೊಳಿಸಿ ರಸ್ತೆ ಅಗಲೀಕರಣಕ್ಕೆ ಅನುಕೂಲ ಮಾಡಿ ಕೊಡಬೇಕೆಂದು ಶಾಸಕ ಎಂಆರ್ ಮಂಜುನಾಥ್ ಅವರು ತಿಳಿಸಿದರು.
ಪಟ್ಟಣದಲ್ಲಿ ಮಲೆ ಮಾದೇಶ್ವರ ಬೆಟ್ಟದಿಂದ ಕೊಳ್ಳೇಗಾಲಕ್ಕೆ ಹೋಗುವ ಮುಖ್ಯ ರಸ್ತೆ ಕೆಶಿಪ್ ರಸ್ತೆ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಮಾತನಾಡಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ ಎಂದು ಸಾರ್ವಜನಿಕರ ಆರೋಪವಾಗಿದೆ ಆದ್ದರಿಂದ ಅಧಿಕಾರಿಗಳು ಕೂಡಲೇ ಕ್ರಮವಹಿಸಿ ಸಾರ್ವಜನಿಕರು ಹಾಗೂ ಮಲೆ ಮಾದೇಶ್ವರ ಬೆಟ್ಟಕ್ಕೆ ಹೋಗುವ ಭಕ್ತಾದಿಗಳಿಗೆ ತೊಂದರೆಯಾಗದಂತೆ ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದರು.ಅಂಗಡಿ ಮಾಲೀಕರು ತಮ್ಮ ಅಂಗಡಿ ಮುಂಗಟ್ಟು ಮತ್ತು ವಸ್ತುಗಳನ್ನು ಖಾಲಿ ಮಾಡಿ ತೆರವುಗೊಳಿಸಿಕೊಡಿ ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣಗೊಳಿಸಲು ಸಹಕಾರ ನೀಡಿ ಎಂದರು.ಅಂಗಡಿ ಮಾಲೀಕರು ಪ್ರತಿಕ್ರಿಯಿಸಿ ಅಂಗಡಿಯಲ್ಲಿರುವ ವಸ್ತುಗಳನ್ನು ಬೇರೆ ಕಡೆಗೆ ಸ್ಥಳಾಂತರಿಸಲು ಹಣ ನೀಡಿರುವುದಿಲ್ಲ, ವಸ್ತುಗಳನ್ನು ಸ್ಥಳಾಂತರಿಸಲು ಹಣ ಕೊಡಿಸಿ, ಹಾಗೂ ಗೌರಿ ಹಬ್ಬದ ತನಕ ನಮಗೆ ಕಾಲಾವಕಾಶ ನೀಡಿ ಎಂದು ಶಾಸಕರಲ್ಲಿ ಮನವಿ ಮಾಡಿದರು. ಶಾಸಕರು ಪ್ರತಿಕ್ರಿಯಿಸಿ ಅಂಗಡಿ ಮಾಲೀಕರು ಮಾಡಿಕೊಂಡಿರುವ ಮನವಿಗೆ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಹೇಶ್ ಕುಮಾರ್,ತಹಸಿಲ್ದಾರ್ ಗುರುಪ್ರಸಾದ್,ಇಂಜಿನಿಯರ್ ಮಹಾಂತೇಶ್, ಎಇಇ ರಾಜೇಶ್ ಮುನ್ಸಿ,ರಾಜಸ್ವನಿರೀಕ್ಷಕ ಮಹದೇವಸ್ವಾಮಿ,ಗ್ರಾಮ ಆಡಳಿತ ಅಧಿಕಾರಿ ಶೇಷಣ್ಣ,ಸಹಾಯಕ ಸಿದ್ದರಾಜು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.