ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿ ಪ್ರತಿಭಟನೆ

ಯಾದಗಿರಿ/ಶಹಾಪುರ:ರಾಜ್ಯದಲ್ಲಿ ಮಳೆಯ ಅಭಾವದಿಂದ ಬರಗಾಲದ ಸಮಸ್ಯೆ ಉಂಟಾಗಿ ರಾಜ್ಯದ ಎಲ್ಲಾ ಜಲಾಶಯಗಳಗಲ್ಲಿ ನೀರಿನ ಪ್ರಮಾಣವು ಕುಸಿತ ಕಂಡಿದೆ ಎಂದು ಬಿಜೆಪಿ ಯುವ ಮುಖಂಡ ದೇವಿಂದ್ರಪ್ಪ ಕೊನೇರ್ ಹೇಳಿದರು. ರೈತರ ಜಮೀನುಗಳಿಗೆ ಸರಿಯಾಗಿ ನೀರು ಪೂರೈಕೆ ಮಾಡಿದೆ ಇರುವುದಕ್ಕೆ ರೈತರು ಆತಂಕಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.ರಾಜ್ಯ ಸರ್ಕಾರ 7 ಗಂಟೆಗಳ ಕಾಲ ವಿದ್ಯುತ್ ನೀಡಬೇಕಾಗಿತ್ತು ಆದರೆ ಇತ್ತೀಚಿನ ದಿನಗಳಲ್ಲಿ ಲೋಡ್ ಶೆಡ್ಡಿಂಗ್ ಪರಿಣಾಮ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಕಾಲಕಾಲಕ್ಕೆ ಸರಿಯಾಗಿ ಮಳೆ ಆಗಿದ ಕಾರಣ ಬರಗಾಲಕ್ಕೆ ತುತ್ತಾಗಿರುವ ಈಗಾಗಲೇ ಶೇ 80 ರಷ್ಟು ಬೆಳೆಗಳು ಬಿತ್ತನೆ ಮಾಡಿದ್ದು ಅವುಗಳನ್ನು ರಕ್ಷಿಸಿಕೊಳ್ಳಲು ವಿದ್ಯುತ್ ಸಮಸ್ಯೆ ಉಂಟಾಗಿ ರೈತರು ಪರದಾಡುವ ಪರಿಸ್ಥಿತಿ ಉಂಟಾಗಿದೆ.
ಈ ಹಿಂದೆ ಬಿಜೆಪಿ ಆಡಳಿತದಲ್ಲಿ ಜಾರಿಯಾದ ಹಲವಾರು ರೈತಪರ ಯೋಜನೆಗಳು ಕಿಸಾನ್ ಸಮ್ಮಾನ ನಿಧಿ ಯೋಜನೆ,ರೈತ ವಿದ್ಯಾ ನಿಧಿ ಯೋಜನೆ,ಭೂ ಸಿರಿ ಯೋಜನೆ,ರೈತ ಸಂಘದ ಯೋಜನೆ,ಎಪಿಎಂಸಿ ಕಾನೂನು,ಕೃಷಿ ಭೂಮಿ ಮಾರಾಟ ಕಾನೂನು,ಜಿಲ್ಲೆಗೊಂದು ಗೋಶಾಲೆ ಯೋಜನ,ಕ್ಷೀರ ಸಮೃದ್ಧಿ,ಸರ್ಕಾರ ಬ್ಯಾಂಕ್ ಈ ಎಲ್ಲಾ ಯೋಜನೆಗಳನ್ನು ರಾಜ್ಯ ಕಾಂಗ್ರೆಸ್ ನಿರ್ಲಕ್ಷಿಸಲಾಗಿದೆ ಎಂದು ಹೇಳಿದರು.
ಆಡಳಿತ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರು ರೈತರ ನೆರವಿಗೆ ಬರಬೇಕು ಎಂದು ಬಿಜೆಪಿ ಕಾರ್ಯಕರ್ತರು ತಾಲೂಕ ದಂಡಾಧಿಕಾರಿ ಕಛೇರಿ ಎದುರಿಗೆ ಪ್ರತಿಭಟನೆ ಮೂಲಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ವರದಿ- ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!