ಬೀದರ್:ಸಮೂಹ ಸಂಪನ್ಮೂಲ ಕೇಂದ್ರ ಕಣಜಿ ವಲಯದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಾಂತಿಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀಮತಿ ಸರಸ್ವತಿಯವರು ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಇದೊಂದು ಉತ್ತಮ ವೇದಿಕೆ ಎಂದು ಹೇಳಿದರು ಇದೇ ಸಂದರ್ಭದಲ್ಲಿ ಕಣಜಿ ವಲಯದ ಸಿಆರ್‌ಪಿ ರವರಾದ ಶ್ರೀ ಸೋಮನಾಥ ವರ್ಧಾ ಶಿಕ್ಷಣ ಕ್ಷೇತ್ರದಲ್ಲಿ ಕಲೆಯನ್ನು ಉತ್ತೇಜಿಸಲು ಇದೊಂದು ಉತ್ತಮ ಕಾರ್ಯಕ್ರಮ ಎಂದು ತಿಳಿಸಿದರು.ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಕ್ಷ್ಮೀಬಾಯಿ ಕಾರ್ಯಕ್ರಮವನ್ನು ಉದ್ಘಾಟಿಸಿದರು ಇದೇ ಸಂದರ್ಭದಲ್ಲಿ ಪ್ರೌಢಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಸೋಮನಾಥ್ ಕಣಜೆ,ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಿವಶರಣಪ್ಪ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಶ್ರೀಮತಿ ಲಕ್ಷ್ಮೀಬಾಯಿ, ಗ್ರಾಮ ಪಂಚಾಯತಿ ಸದಸ್ಯರಾದ ವಿಜಯಲಕ್ಷ್ಮಿ, ಭಾರತ್ ಭೂಷಣ್, ಮಲ್ಲಿಕಾರ್ಜುನ್ ಪಾಟೀಲ್, ಕಲ್ಯಾಣ್ ರಾವ್ ಕುಂಬಾರ್ಗೆರೆ, ಗಣಪತಿ ಭಕ್ತಾ, ಶಾಂತಣ್ಣ,ಸಿಆರ್ಪಿಗಳಾದ ಅಂಬರೀಶ್, ಮಹಾದೇವ್, ಗೌಸೋಧಿನ್ ಶೇಕ್, ಇತರರು ಭಾಗವಹಿಸಿದ್ದರು, ಕಾಮಶೆಟ್ಟಿ ಕಾರ್ಯಕ್ರಮದ ನಿರೂಪಣೆ ಮಾಡಿದರು, ಶ್ರೀಮತಿ ಸುರೇಖಾ ಸ್ವಾಗತಿಸಿದರು, ಶ್ರೀ ಶಿವಶಂಕರ್ ವಂದಿಸಿದರು.
ವರದಿ-ಮಹಾನ್ ಕೋಟೆ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.