ಹನೂರು ತಾಲೂಕಿನ ಲೋಕೋಪಯೋಗಿ ಅತಿಗಣ್ಯವ್ಯಕ್ತಿ ಅತಿಥಿ ಗೃಹದಲ್ಲಿ ಇಂದು ವಿಶ್ವ ಕರ್ಮ ಜಯಂತಿ ಪೂರ್ವಭಾವಿ ಸಭೆ ಜರುಗಿತು.
ವಿಶ್ವ ಕರ್ಮ ಜಯಂತಿಯನ್ನು ಅ.1ರಂದು ಪಟ್ಟಣದಲ್ಲಿ ಸಡಗರ ಸಂಭ್ರಮದಿಂದ ಅರ್ಥಪೂರ್ಣ ಆಚರಣೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.ವಿಶ್ವಕರ್ಮ ಜಯಂತಿ ಅಂಗವಾಗಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಹನೀಯರ ಹಾಗೂ ಹಿರಿಯರ ಗೌರವಿಸುವುದು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಇದೀಗ ವಿಶ್ವಕರ್ಮ ಜಯಂತಿಯನ್ನು ಸಹ ಆಚರಣೆ ಮಾಡಲಾಗುತ್ತಿದ್ದು ಸಮುದಾಯದ ಮುಖಂಡರುಗಳ ಜೊತೆ ಚರ್ಚೆ ನಡೆಸಿ ಅಕ್ಟೋಬರ್ 1ರಂದು ದಿನಾಂಕ ನಿಗದಿಪಡಿಸಲಾಗಿದೆ ಅಂದು ಬೆಳಿಗ್ಗೆ 9ಗಂಟೆಗೆ ಆರ್.ಎಂ.ಸಿ ಆವರಣದಲ್ಲಿ ಚಾಲನೆ ನೀಡಲಾಗುವುದು ಬಳಿಕ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಪಟ್ಟಣದಲ್ಲಿ ವೇದಿಕೆ ಕಾರ್ಯಕ್ರಮ ಮೂಲಕ ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದರು.
ಜಯಂತಿಯಲ್ಲಿ ಯಾವುದೇ ರೀತಿಯ ಲೋಪದೋಷವಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ನಡೆಸಬೇಕು ಇದಕ್ಕಾಗಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಇದೆ ವೇಳೆ ಸೂಚನೆ ನೀಡಿದರು.
ಸಭೆಯಲ್ಲಿ ತಹಸೀಲ್ದಾರ್ ಗುರು ಪ್ರಸಾದ್, ಸಿ.ಡಿ.ಪಿ.ಒ ನಂಜಮಣಿ ಗ್ರಾಮ ಲೆಕ್ಕ ಆಡಳಿತ ಅಧಿಕಾರಿ ಶೇಷಣ್ಣ,ದೈಹಿಕ ಪರಿವೀಕ್ಷಕ ಮಹದೇವ್, ಅಗ್ನಿ ಶಾಮಕ ದಳ ಸಿಬ್ಬಂದಿ ಮಹೇಶ್,ಮುಖಂಡರಾದ ಮುತ್ತು,ವೀರಚಾರಿ, ಆರ್.ರಾಚಪ್ಪಾಜಿ,ತಮ್ಮಯಚಾರಿ,ಮುತ್ತುರಾಜು, ದೊರೆ,ರಾಮಾಚಾರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.