ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹೈದರಾಬಾದ್ ಕರ್ನಾಟಕ ವಿಮೋಚನೆಯ ರೂವಾರಿಯಾದ ಉಕ್ಕಿನ ಮನಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಿಎಂ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ನಿನ್ನೆ ಬೆಳಿಗ್ಗೆ ಕಲಬುರಗಿ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮಕ್ಕೂ ಮುನ್ನ ಹೈದ್ರಾಬಾದ್ ಕರ್ನಾಟಕ ವಿಮೋಚನೆಯ ರೂವಾರಿಯಾಗಿರುವ ಉಕ್ಕಿನ ಮನುಷ್ಯ ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ತದನಂತರ ನೆರೆದ ಜನಸ್ತೋಮದತ್ತ ಕೈಬೀಸಿ ಕಲ್ಯಾಣ ಕರ್ನಾಟಕ ಉತ್ಸವದ ಶುಭಕೋರಿದರು.
ಕಲಬುರಗಿ ನಗರದ ಎಸ್.ವಿ.ಪಿ. ವೃತ್ತದಲ್ಲಿ ಪಟೇಲ್ ಅವರ ಮೂರ್ತಿಗೆ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಸೇರಿ ಜಿಲ್ಲೆಯ ಇತರೆ ಶಾಸಕರು, ಜನಪ್ರತಿನಿಧಿಗಳೊಂದಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಬಿ.ಆರ್.ಪಾಟೀಲ, ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ಎಂ.ಎಲ್.ಸಿಗಳಾದ ಶಶೀಲ ನಮೋಶಿ, ತಿಪ್ಪಣ್ಣಪ್ಪ ಕಮಕನೂರ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರರಾದ ವಿಶಾಲ್ ಧರ್ಗಿ, ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ., ಐ.ಜಿ.ಪಿ. ಅಜಯ್ ಹಿಲೋರಿ, ಡಿ.ಸಿ. ಬಿ.ಫೌಜಿಯಾ ತರನ್ನುಮ್, ಕಲಬುರಗಿ ನಗರ ಪೋಲೀಸ್ ಆಯುಕ್ತ ಚೇತನ್ ಆರ್., ಡಿ.ಸಿ.ಪಿ. ಕನಿಕಾ ಸಿಕ್ರಿವಾಲ್ ಮತ್ತಿತರಿದ್ದರು.
ಇದಕ್ಕೂ ಮುನ್ನ ಹೈದ್ರಾಬಾದ್ ಕರ್ನಾಟಕ ಇತಿಹಾಸ ರಚನಾ ಸಮಿತಿ ಸದಸ್ಯ ಕಾರ್ಯದರ್ಶಿ ಲಕ್ಣ್ಮಣ ದಸ್ತಿ ಅವರು, ಹೈದ್ರಾಬಾದ ಕರ್ನಾಟಕ ವಿಮೋಚನೆ ಹೋರಾಟ ಕುರಿತು ಮಾತನಾಡಿದರು.
ಸರ್ದಾರ್ ವಲ್ಲಭಭಾಯಿ ಪಟೇಲ್ ಮೂರ್ತಿಗೆ ಮಾಲಾರ್ಪಣೆ ಮಾಡಲು ಆಗಮಿಸಿದ ಸಿ.ಎಂ. ಅವರಿಗೆ ಕಲಾವಿದರು ಡೊಳ್ಳು, ವೀರಗಾಸೆ, ನಂದಿ ಧ್ವಜ, ಲಂಬಾಣಿ ನೃತ್ಯ, ಗರುಡ ಗೊಂಬೆ, ಕರಡಿ ಮಜಲು, ಕಣಿ ಹಲಗಿ, ಕೊಂಬು ಕಹಳೆಯೊಂದಿಗೆ ಭರ್ಜರಿ ಸ್ವಾಗತ ಕೋರಿದರು.

ವರದಿ:ಅಪ್ಪಾರಾಯ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ