ಹನೂರು:ಶಾಸಕರಾದ ಎಂ.ಆರ್.ಮಂಜುನಾಥ್ ಕೌದಳ್ಳಿಯಿಂದ ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುವ ರಸ್ತೆಯ ಪ್ಯಾಚಿಂಗ್ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.ಮಹದೇಶ್ವರ ಬೆಟ್ಟದ ಮುಖ್ಯ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿ ಬಿದ್ದು ಹಾಳಾಗಿರುವ ರಸ್ತೆಗೆ ಪ್ಯಾಚಿಂಗ್ ಕಾಮಗಾರಿಯನ್ನು ಮಾಡಲಾಗುತ್ತಿದ್ದು ಶಾಸಕರು ಭೇಟಿ ನೀಡಿ ಪರಿಶೀಲಿಸಿ ಕಾಮಗಾರಿ ಯಾವುದೇ ಲೋಪದೋಷವಾಗದ ರೀತಿಯಲ್ಲಿ ಕಾಮಗಾರಿ ಕೆಲಸವನ್ನು ಅಧಿಕಾರಿಗಳಿಗೆ ಸೂಚಿಸಿದರು.
ರಸ್ತೆಯ ಪ್ಯಾಚಿಂಗ್ ಕಾಮಗಾರಿ ಮುಗಿಯುವವರೆಗೂ ಅಧಿಕಾರಿಗಳು ಸ್ಥಳದಲ್ಲಿ ಇದ್ದು ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಪಿಡಬ್ಲ್ಯೂಡಿ ಇಂಜಿನಿಯರ್ ಚಿನ್ನಣ ಹಾಗೂ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.