ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಶಿವಪೂರ ಮಿಣಜಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಇದು ಶಿಕ್ಷಣ ಮನರಂಜನೆ ಹಾಗೂ ಅಭಿವೃದ್ಧಿಗೆ ಉತ್ತೇಜಿಸುತ್ತದೆ ಮಕ್ಕಳಲ್ಲಿನ ಗುಪ್ತ ಪ್ರತಿಭೆಯನ್ನು ಹೊರತರುತ್ತದೆ ವಿಧ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಂದಲು ವೇದಿಕೆಯಾಗಿದೆ ವಿಧ್ಯಾರ್ಥಿಗಳಿಲ್ಲಿನ ಪ್ರತಿಭೆಯನ್ನು ಗುರುತಿಸಿ ಹೊರತರಲು ಶಿಕ್ಷಕರಿಗೆ ಅವಕಾಶವನ್ನು ನೀಡುತ್ತದೆ
ಪ್ರತಿಭಾ ಕಾರಂಜಿ ಎಂಬುದು ಕಲಾ ಪ್ರತಿಭೆಗಳ ಚಿಣ್ಣರ ಹಬ್ಬ ಪೋಷಕರಿಗಲ್ಲದೇ ಸಾರ್ವಜನಿಕರು ಕೂಡಾ ಖುಷಿ ಪಡುವ ಹಬ್ಬ ಮಕ್ಕಳ ಪ್ರತಿಭೆಯನ್ನು ತಂದೆ ತಾಯಿಗಳು ಹತ್ತಿರದಿಂದ ಕಣ್ತುಂಬಿಕೊಳ್ಳುವ ವೇದಿಕೆಯಾಗಿದೆ ತಾಲ್ಲೂಕು ಜಿಲ್ಲಾ ಮತ್ತು ರಾಜ್ಯ ಮಟ್ಟದವರಗೆ ಸ್ಪರ್ಧೆ ಇರುವುದರಿಂದ ಶಾಲೆ ಶಿಕ್ಷಕರು ಮತ್ತು ತರಬೇತಿ ನೀಡಿ ಸಜ್ಜು ಗೊಳಿಸಬೇಕು ಸರ್ಕಾರ ಉಚಿತ ಸೈಕಲ್ ಹಾಗೂ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿ ಮಾಡಿ ಗುಣಮಟ್ಟದ ಶಿಕ್ಷಣಕ್ಕೆ ಪ್ರಯತ್ನಿಸುತ್ತದೆ.ಇದರಿಂದ ಸ್ಥಳೀಯ ಜನಪದ ನೃತ್ಯ ಸಂಗೀತ ಹಾಗೂ ಗಾಯನ ನಾಟಕ,ಚಿತ್ರಕಲೆ,ಪ್ರಬಂಧ,ಚರ್ಚಾಸ್ಪರ್ಧೆ, ಏಕಾಪಾತ್ರಾಭಿನಯ,ಸಾಮಾಜಿಕ ಮತ್ತು ಪೌರಾಣಿಕ ಅನೇಕ ಕಲಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳು ಪ್ರತಿಭಾ ಕಾರಂಜಿ ವ್ಯಾಪ್ತಿಯಲ್ಲಿ ಬರುವುದರಿಂದ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಜನತೆಗೆ ವಿಧ್ಯಾರ್ಥಿಗಳಲ್ಲಿ ಕಲಾಭಿರುಚಿಯ ಸಾಮರ್ಥ್ಯವನ್ನು ಸಾಭೀತು ಮಾಡಲು ಇದೊಂದು ಉತ್ತಮ ವೇದಿಕೆ ಎಂದು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ B .T.ವಜ್ಜಲ್ ಅವರು ತಿಳಿಸಿದರು ಕಾರ್ಯಕ್ರಮವನ್ನು ಒಂದು ಡೊಳ್ಳಿನ ಮೂಲಕ ಚಾಲನೆ ಮಾಡಿದರು ಊರಿನ ಗ್ರಾಮ ಪಂಚಾಯತಿ ಅಧ್ಯಕ್ಷರು R.S.ಮೇಟಿ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಅಧ್ಯಕ್ಷರಾದ B.T ವಜ್ಜಲ್ ಗುರುಗಳು ಹಾಗೂ ಎಲ್ಲಾ ಶಾಲೆಯ ಶಿಕ್ಷಕರು ಭಾಗವಹಿಸಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಮಕ್ಕಳಿಗೆ ಪ್ರಶಸ್ತಿ ಪತ್ರವನ್ನು ನೀಡಲಾಯಿತು.
ವರದಿ ಉಸ್ಮಾನ ಬಾಗವಾನ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.