ಸಿಂಧನೂರು ತಾಲೂಕಿನ ಮಲ್ಲಾಪುರ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಸಿರಿ ಫೌಂಡೇಶನ್ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸಸ್ಯಶಾಮಲ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮವನ್ನು CRP ಷಣ್ಮುಖಗೌಡ ಅವರು ಸಸಿನೆಟ್ಟು ನೀರುಣಿಸುವ ಮೂಲಕ ಚಾಲನೆ ನೀಡಿದರು
ಇದೇ ವೇಳೆ ಮಾತನಾಡಿ ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟು ಪೋಷಿಸುವ ಮೂಲಕ ಶ್ರಮದಾನ ವಹಿಸಬೇಕು.ಜೊತೆಗೆ ಶಿಕ್ಷಕರು,ಪೋಷಕರು,ಶಾಲಾ ಮೇಲುಸ್ತುವಾರಿ ಸಮಿತಿ ಸದಸ್ಯರು,ಸಂಘ ಸಂಸ್ಥೆಗಳು ಕೈಜೋಡಿಸಬೇಕು.ಶಾಲಾ ವಿದ್ಯಾರ್ಥಿಗಳಲ್ಲಿ ಪರಿಸರ ಪ್ರೇಮ,ಪರಿಸರ ಜಾಗೃತಿ ಮತ್ತು ಅರಣ್ಯ ಸಂರಕ್ಷಣೆಯ ಕುರಿತು ಕಾಳಜಿಯನ್ನು ಉಂಟುಮಾಡುವುದು ಸಸ್ಯ ಶ್ಯಾಮಲ ಕಾರ್ಯಕ್ರಮದ ಉದ್ದೇಶವಾಗಿದೆ.ಈಗಾಗಲೇ ವನಸಿರಿ ಫೌಂಡೇಶನ್ ಈ ಕಾರ್ಯವನ್ನು ಮಾಡಲು ಮುಂದಾಗಿದೆ ಪ್ರತಿಯೊಬ್ಬರೂ ವನಸಿರಿ ಫೌಂಡೇಶನ್ ಕಾರ್ಯಕ್ಕೆ ಕೈಜೋಡಿಸಿ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರು.
ಇದೇ ವೇಳೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪುರ ಮಾತನಾಡಿ ಮಕ್ಕಳಿಗೆ ಪರಿಸರ ಕಾಳಜಿ ಮೂಡಿಸುವ ಸಲುವಾಗಿ ಸರ್ಕಾರ ಸಸ್ಯ ಶ್ಯಾಮಲ ಕಾರ್ಯಕ್ರಮವನ್ನು ಜಾರಿಗೆ ತಂದಿರುವುದು ತುಂಬಾ ಸಂತೋಷದಾಯಕ.ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಲ್ಲಿ ಅತೀ ಹೆಚ್ಚಾಗಿ ಭಾಗವಹಿಸಿ ಪರಿಸರ ಸಂರಕ್ಷಣೆಗೆ ಮುಂದಾಗಬೇಕು.ಇವತ್ತು ಗಿಡಮರಗಳಿದ್ದರೆ ನಾವು ಉಳಿಯೋದು ಇಲ್ಲವಾದಲ್ಲಿ ನಾವುಗಳೆಲ್ಲರೂ ಮುಂದಿನ ದಿನಗಳಲ್ಲಿ ಶುದ್ಧವಾದ ಗಾಳಿ ಪಡೆಯಲು ತುಂಬಾ ಕಷ್ಟಪಡಬೇಕಾಗುತ್ತದೆ ಈಗಿನಿಂದಲೇ ಪ್ರತಿಯೊಬ್ಬರೂ ಮನೆಯ ಮುಂದೆ ಒಂದೊಂದು ಗಿಡ ನೆಡುವ ಸಂಕಲ್ಪ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಮುಖ್ಯಗುರುಗಳಾದ ಅಮರೇಶ,SDMCಅದ್ಯಕ್ಷರಾದ ದುಗ್ಗಪ್ಪ,ಉಪಾದ್ಯಕ್ಷ ಪಕೀರಸಾಬ್,ಶಾಲೆಯ ಶಿಕ್ಷಕರು,ಅತಿಥಿ ಶಿಕ್ಷಕರು,ಹಳೆಯ ವಿದ್ಯಾರ್ಥಿಗಳಾದ ಕೆ,ವೀರೇಶ,ದೇವರಾಜ,ಅಣ್ಣಾಜಿಗೌಡ ಹಾಗೂ ಶಾಲೆಯ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
