ಬೀದರ್‌ನಲ್ಲಿ ಭಾನುವಾರ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದಿಂದ ಕಲಾವಿದೆ ಶಿವಾನಿ ಅವರಿಗೆ ಸನ್ಮಾನಿಸಲಾಯಿತು.ವಿಜಯಕುಮಾರ ಸೋನಾರೆ,ಸುನಿಲ್ ಭಾವಿಕಟ್ಟಿ,ಸುನಿಲ್ ಕಡ್ಡೆ, ಶಿವದಾಸ ಸ್ವಾಮಿ,ಕವಿತಾ ಸ್ವಾಮಿ ಶಿವದಾಸ ಸ್ವಾಮಿ ಇತರರು ಇದ್ದರು.
ಸೋನಿ ಟಿವಿಯ ಇಂಡಿಯನ್ ಐಡಿಯಲ್ ಸಂಗೀತ ಸ್ಪರ್ಧೆಯ ಟಿವಿ ರೌಂಡ್‌ನಲ್ಲಿ ಆಯ್ಕೆಯಾಗುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿರುವ ಸಂಗೀತ ಕಲಾವಿದೆ ಶಿವಾನಿ ಶಿವದಾಸ ಸ್ವಾಮಿ ಅವರನ್ನು ನಗರದ ಅವರ ನಿವಾಸದಲ್ಲಿ ಭಾನುವಾರ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದಿಂದ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಕುಮಾರಿ ಶಿವಾನಿ ಶಿವದಾಸ ಸ್ವಾಮಿ ಅವರು,ಕಳೆದ ಹಲವು ವರ್ಷಗಳಿಂದ ಸಂಗೀತ ಅಭ್ಯಾಸ ಮಾಡುತ್ತಿದ್ದು, ಪ್ರಪ್ರಥಮ ಬಾರಿಗೆ ಸೋನಿ ಟಿ.ವಿ.ಯ ಇಂಡಿಯನ್ ಐಡಿಯಲ್ ಸಂಗೀತ ಸ್ಪರ್ಧೆಯಲ್ಲಿ ಭಾಗವಹಿಸಿ, ಪ್ರಥಮ ಹಂತದಲ್ಲಿಯೇ ನಾನು ಟಿ.ವಿ. ರೌಂಡ್‌ನಲ್ಲಿ ಆಯ್ಕೆಯಾಗಿದ್ದರೆ ನನಗೆ ಅತಿ ಆನಂದವಾಗಿದೆ. ನನ್ನ ತಾಯಿ ಹಾಗೂ ತಂದೆಯವರು ಸೇರಿದಂತೆ ನಮ್ಮ ಪರಿವಾರ ಸಂಗೀತ ರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದೇವೆ. ನನ್ನ ಅಜ್ಜಿಯಿಂದ ನನ್ನ ಅಮ್ಮನಿಗೆ,ಅಮ್ಮನಿಂದ ನನಗೆ ಸಂಗೀತ ಬಳುವಳಿಯಾಗಿ ಬಂದಿದೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ
ವಿಜಯಕುಮಾರ ಸೋನಾರೆ, ಬೀದರ್ ಜಿಲ್ಲೆಯಲ್ಲಿ
ಪ್ರತಿಭೆಗಳ ಕೊರತೆ ಇಲ್ಲ ಆದರೂ ಪ್ರತಿಭೆಗಳನ್ನು ಗುರುತಿಸಿ,ಪ್ರೋತ್ಸಾಹಿಸುವ ವೇದಿಕೆಗಳು ಇಲ್ಲದ ಕಾರಣ ಜಿಲ್ಲೆಯ ಅದೆಷ್ಟೋ ಕಲಾವಿದರು ಎಲೆಮರೆ ಕಾಯಿಯಂತೆ ಇದ್ದಾರೆ.
ರಾಜ್ಯದಲ್ಲಿ ನಡೆಯುವ ಬೀದರ್ ಉತ್ಸವ, ಬಸವ ಉತ್ಸವ, ಹಂಪಿ ಉತ್ಸವ, ದಸರಾ ಉತ್ಸವ ಹಾಗೂ ಇತ್ಯಾದಿ ರಾಜ್ಯಮಟ್ಟದ ಕಾರ್ಯಕ್ರಮಗಳಲ್ಲಿ ಹೊರ ರಾಜ್ಯದ ಕಲಾವಿದರಿಗಿಂತ ಸ್ಥಳೀಯ ಕಲಾವಿದರಿಗೆ ವೇದಿಕೆ ಕಲ್ಪಿಸಿದರೆ, ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಸುನೀಲ್ ಕಡ್ಡೆ ಮಾತನಾಡಿ, ಕುಮಾರಿ ಶಿವಾನಿ ಶಿವದಾಸ ಸ್ವಾಮಿ ಅವರು ಸೋನಿ ಟಿ.ವಿ.ಯ ಇಂಡಿಯನ್ ಐಡಿಯಲ್ ಸಂಗೀತ ಸ್ಪರ್ಧೆಯಲ್ಲಿ ಟಿ.ಎ. ರೌಂಡ್‌ನಲ್ಲಿ 13 ಸಾವಿರ ಸ್ಪರ್ಧಿಗಳಲ್ಲಿ ಆಯ್ಕೆಯಾಗಿ, ಜಿಲ್ಲೆಯ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುವಂತೆ ಮಾಡಿದ್ದಕ್ಕೆ ಶಿವಾನಿ ಸ್ವಾಮಿ ಅವರ ಕುಟುಂಬಕ್ಕೆ ಹೃದಯಪೂರ್ವಕ ಅಭಿನಂದಿಸುವೆ ಎಂದರು.
ಈ ವೇಳೆ,ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಸುನೀಲ್ ಭಾವಿಕಟ್ಟಿ,ಚಂದ್ರಕಾಂತ ಹಳ್ಳಿಖೇಡ್ಕರ್, ಕವಿತಾ ಸ್ವಾಮಿ,ಶಿವದಾಸ ಸ್ವಾಮಿ ಪರಿವಾರದವರು ಹಾಗೂ ಒಕ್ಕೂಟದ ಪದಾಧಿಕಾರಿಗಳು ಇದ್ದರು.
ವರದಿ:ಸಾಗರ್ ಪಡಸಲೆ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.