ಶಹಾಪುರ:ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಪಠ್ಯೇತರ ಚಟುವಟಿಕೆಗಳ ಜೊತೆಗೆ ಉತ್ತಮ ಆರೋಗ್ಯ ಮುಖ್ಯವಾಗಿದೆ ಎಂದು ಹೇಳಿದರು.ತಾಲೂಕ ಮಟ್ಟದ 14 ರಿಂದ 17 ವಯೋಮಿತಿಯ ಒಳಗಿನ ಬಾಲಕ,ಬಾಲಕಿಯರು ಕ್ರೀಡಾಕೂಟ ಹಿನ್ನೆಲೆ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿದ ಸಚಿವ ದರ್ಶನಪುರ ಅವರು,ದೈಹಿಕ,ಶಾರೀರಿಕ ಚೈತನ್ಯ, ಮಾನಸಿಕ ಒತ್ತಡದಿಂದ ಹೊರಬರಲು ಸಾಧ್ಯ. ವಿದ್ಯಾರ್ಥಿಗಳು ಜೀವನದಲ್ಲಿ ಪಠ್ಯೇತರ ಚಟುವಟಿಕೆಗಳ ಜೊತೆಗೆ ಉತ್ತಮ ಆರೋಗ್ಯ ಮುಖ್ಯ ಮತ್ತು ವಿದ್ಯಾರ್ಥಿ ಪರಿಪೂರ್ಣವಾಗಲು ಸಾಧ್ಯ.
ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆ ಸೇರಿದಂತೆ ಅಗಾಧ ಪ್ರತಿಭೆ ಅಡಗಿರುತ್ತವೆ ಆದರೆ ಪಾಲಕರು ಹಾಗೂ ಶಾಲಾ ಶಿಕ್ಷಕರು ಗುರುತಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು ಆಟದಲ್ಲಿ ಸೋಲು ಗೆಲುವು ಇದ್ದಿದ್ದೇ ಆಟದಲ್ಲಿ ಭಾಗವಹಿಸಿ ಪ್ರತಿಭೆ ತೋರಿಸಿ ವಿದ್ಯಾರ್ಥಿಗಳು ಕ್ರೀಡೆ,ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು.ಕ್ರೀಡೆಗಳ ದೈಹಿಕ, ಮಾನಸಿಕವಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು. ಪ್ರಾಥಮಿಕ,ಪ್ರೌಢ ಶಾಲಾ ಹಂತದ ವಿದ್ಯಾರ್ಥಿಗಳು ಈಗಿನಿಂದಲೇ ಆತ್ಮಸ್ಥೈರ್ಯ ತುಂಬಿಕೊಂಡು ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕ್ರೀಡೆ ಬಹಳ ಮುಖ್ಯವಾದದ್ದು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ್,ಅಕ್ಷರ ದಾಸೋಹ ಅಧಿಕಾರಿ ಸೂರ್ಯವಂಶಿ,ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷ ರಾಯಪ್ಪಗೌಡ ಹುಡೇದ, ಬಿ.ಆರ್.ಸಿ ಶ್ರೀಮತಿ ರೇಣುಕಾ ಪಾಟೀಲ್, ಶಿವಲಿಂಗಪ್ಪ,ಬಸವರಾಜ ಯಾಳಗಿ,ಚಂದ್ರಶೇಖರ ವೈದ್ಯ,ಸೇರಿದಂತೆ ದೈಹಿಕ ಶಿಕ್ಷಕರು ಹಾಗೂ ಸುತ್ತಮುತ್ತಲಿನ ಕ್ರೀಡಾ ಅಭಿಮಾನಿಗಳು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.