ಚಾಮರಾಜನಗರ ನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವ ಕಾರಣ ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆ ಗುಂಡ್ಲುಪೇಟೆಯಲ್ಲಿ ರಸ್ತೆ ತಡೆದು ವಿವಿಧ ಸಂಘಟನೆ ಹಾಗೂ ಮಾಜಿ ಶಾಸಕರಾದ ನಿರಂಜನ್ ಕುಮಾರ್ ನೇತೃತ್ವದಲ್ಲಿ ಗುಂಡ್ಲುಪೇಟೆಯಲ್ಲಿ ಬಂದ್ ಯಶಸ್ವಿಯಾಗಿ ಜರುಗಿತು.ಕರ್ನಾಟಕ ರಾಜ್ಯ ಮೂಲಭೂತ ಹಕ್ಕು ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸಂಘದ ಅಧ್ಯಕ್ಷರಾದ ಮಂಗಳಮ್ಮ ಅವರು ರಸ್ತೆ ತಡೆದು ಪ್ರತಿಭಟನೆ ಮಾಡಿದರು.ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರು ಗಿರೀಶ್ ಮತ್ತು GDL ಸುರೇಶ ಮತ್ತು ರೈತ ಸಂಘದ ಅಧ್ಯಕ್ಷರು ಪದಾಧಿಕಾರಿಗಳು,ವಿವಿಧ ಸಂಘದ ಅಧ್ಯಕ್ಷರು,ಪದಾಧಿಕಾರಿಗಳು ಎಲ್ಲರೂ ಭಾಗಿಯಾಗಿ ಬಂದ್ ಯಶಸ್ವಿಗೊಳಿಸಿದರು.
ವರದಿ-ಗುಂಡ್ಲುಪೇಟೆ ಕುಮಾರ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.