ಕಲಬುರಗಿ;ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜಯಂತ್ಯೋತ್ಸವದ ಹಿನ್ನೆಲೆಯಲ್ಲಿ ದೇಶದಾದ್ಯಂತ ಸ್ವಚ್ಛತಾ ಕಾರ್ಯಕ್ರಮಗಳು ಜರುಗಿದವು.ಅದರಂತೆಯೇ ಭಾನುವಾರ ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಭಾಗವಹಿಸಿ ಕಾರಿಡಾರ್ ಸುತ್ತಲೂ ಕಸ ಗುಡಿಸಿದರು.ಜಿಲ್ಲಾಡಳಿತ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಎಡಿಸಿ ರಾಯಣ್ಣ ಹುಣಸಗಿ,ಡಿಡಿಪಿಯು ಶಿವಶರಣಪ್ಪ ಮೂಳೆಗಾಂವ ಸೇರಿದಂತೆ ಇತರರು ಇದ್ದರು.
ವರದಿ:ಅಪ್ಪಾರಾಯ ಬಡಿಗೇರ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್ಲೈನ್ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ