ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ನಡೆದ ಮಹಾತ್ಮ ಗಾಂಧಿ ಜಯಂತಿ ಹಾಗೂ ವಿಶೇಷ ಗ್ರಾಮ ಸಭೆಯಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ಮಹಾತ್ಮಗಾಂಧೀಜಿ ಅವರು ಸ್ವಾತಂತ್ರ ತಂದು ಕೊಟ್ಟಾಗ ಅವರ ಕನಸು ನಮ್ಮ ದೇಶ ಸ್ವಚ್ಚ
ಆಗಿರಬೇಕು ಎಂದು ಇತ್ತು ಹಾಗೆಯೇ ನಾವು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು ಹಾಗೂ ಪ್ರತಿಯೊಂದು ಮನೆಯಲ್ಲಿ ಶೌಚಾಲಯ ಇರಬೇಕು ಈ ಕಾರ್ಯಕ್ರಮ ಮಾಡುವುದು ಪೌರಕಾರ್ಮಿಕರು ಮಾತ್ರ ಅಲ್ಲ ಸ್ವಚತೆಯಾಗಿ ಇಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಪ್ರತಿಯೊಂದು ಮನೆಯಲ್ಲೂ ಸಹ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಪ್ರತಿಯೊಬ್ಬರ ಜವಾಬ್ದಾರಿ ಎಂದು ನೆರೆದಿದ್ದಂತಹ ಗ್ರಾಮಸ್ಥರಿಗೆ ಮನಮುಟ್ಟುವಂತೆ ಹೇಳಿದರು.
ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಗ್ರಾಮಸ್ಥರು ಸಹಕಾರ ನೀಡಿದರೆ ಮಾತ್ರ ಗ್ರಾಮ ಸ್ವಚ್ಛವಾಗಿಡಲು ಆಗುತ್ತದೆ ಎಂದು ಹೇಳಿದರು.
ಇದೆ ಸಂದರ್ಭದಲ್ಲಿ ಬಂಡಳ್ಳಿ ಗ್ರಾಮದ ಪೌರಕಾರ್ಮಿಕರಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು ನಂತರ ಬೀದಿಯಲ್ಲಿ ಗ್ರಾಮ ಪಂಚಾಯತಿ ಸದಸ್ಯರುಗಳು ಅಧ್ಯಕ್ಷರು ಉಪಾಧ್ಯಕ್ಷರುಗಳು ಬೀದಿಯನ್ನು ಸ್ವಚ್ಛಗೊಳಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರು ಯಶೋಧ,ಉಪಾಧ್ಯಕ್ಷರು ಹಬೀಬ ಖಾನಂ, ಸದಸ್ಯರುಗಳಾದ ನಾಗರಾಜು,ಬಾಬು,ಶಾಹುಲ್ ಅಹ್ಮದ್ ಕಾಂತರಾಜು,ಶ್ರೀನಿವಾಸ್,
ಊರಿನ ಮುಖಂಡರಾದ ಶ್ರೀನಿವಾಸ್ ಮೂರ್ತಿ ಗ್ರಂಥಾಲಯ ಮೇಲ್ವಿಚಾರಕ ವೆಂಕಟೇಶ್ ಪಿ,ಗ್ರಾಮ ಪಂಚಾಯತಿ ಸಿಬ್ಬಂದಿಗಳು;ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.