ಹನೂರು:ಮಲೈ ಮಹದೇಶ್ವರ ಬೆಟ್ಟದಲ್ಲಿ ಸಂಪೂರ್ಣ ಮಧ್ಯ ಮಾರಾಟ ನಿಷೇಧಕ್ಕೆ ಕ್ರಮ ಕೈಗೊಳ್ಳಲು ಶಾಸಕ ಎಂ ಆರ್ ಮಂಜುನಾಥ್ ಸೂಚಿಸಿದರು.ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ಕರೆದು ಮಾತನಾಡಿದ ಅವರು ನಮ್ಮ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚು ಹೊತ್ತು ನೀಡುತ್ತಿದ್ದೇವೆ ಸಫಾರಿಯನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.ಮಲೈ ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯನ್ನೂ ಸಂಪೂರ್ಣ ನಿಷೇಧಿಸಬೇಕು.
ತಾಳುಬೆಟ್ಟದಲ್ಲಿ ಮಧ್ಯ ಕಳ್ಳ ಸಾಗಣೆ ತಡೆಗಟ್ಟುವ ದೆಸೆಯಲ್ಲಿ ಕ್ರಮ ಕೈಗೊಳ್ಳಬೇಕು.
ಖಾಸಗಿ ವಸತಿಗೃಹಗಳಲ್ಲಿ ನಡೆಯುವ
ಅಕ್ರಮಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ಆಗಿರುವ ಹಾಗೂ ಆಗಬೇಕಾಗಿರುವ ಕೆಲಸಗಳ ಬಗ್ಗೆ ಮಾಹಿತಿ ನೀಡಲು ಸೂಚಿಸಿದರು.ಬೆಟ್ಟದ ಸುತ್ತ ಮುತ್ತ ಶಾಲೆ ಮತ್ತು ಅಂಗನವಾಡಿಗಳಿಗೆ ಅಧಿಕಾರಿಗಳ ತಂಡವನ್ನು ರಚನೆ ಮಾಡಿ ಅಲ್ಲಿ ಎಲ್ಲಾ ರೀತಿಯ ಸೌಲಭ್ಯಗಳಿವೆಯಾ ಇಲ್ಲವೋ ಎಂಬುದನ್ನು ಗಮನಹರಿಸಬೇಕು.
ಈ ಕೇತ್ರ ಸಂಪೂರ್ಣವಾಗಿ ಆರ್ಥಿಕವಾಗಿ ಹಿಂದುಳಿದ ಜನರಿದ್ದಾರೆ ಅವರನ್ನು ಅದರಿಂದ ಹೊರತರುವಂತ ಕೆಲಸವನ್ನು ಮಾಡಬೇಕು.
ಮಧ್ಯ ಮಾರಾಟ ನಿಷೇಧ ಸೂಚನಾ ಫಲಕವನ್ನು ಅಳವಡಿಸಿ ಜನರಲ್ಲಿ ಅರಿವು ಮೂಡಿಸುವಸುವಂತೆ ಸೂಚಿಸಿದರು.ರಸ್ತೆಗಳ ಅಭಿವೃದ್ಧಿ ಹಾಗೂ ರಸ್ತೆಗಳ ಅಗಲೀಕರಣ ಮಾಡಲು ಅಗತ್ಯಕ್ರಮ ವಹಿಸಲು ತಿಳಿಸಿದರು.ದೇವಸ್ಥಾನ ಹತ್ತಿರ ಹೆಚ್ಚು ಸ್ಥಳಾವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಬೆಟ್ಟದ ಸುತ್ತ ಮುತ್ತವಿರುವ ಬೀದಿಬದಿ ವ್ಯಾಪಾರಿಗಳಿಗೆ ಸೂಕ್ತವಾದ ಸ್ಥಳ ಕಲ್ಪಿಸಲು ತಿಳಿಸಿದರು.ಹಂದಿಗಳ ಹಾವಳಿ ಹೆಚ್ಚಾಗಿರುವುದರಿಂದ ಹಂದಿಗಳು ಮೋರಿ ಚರಂಡಿಗಳಲ್ಲಿ ಓಡಾಡುವುದರಿಂದ ಸಾಂಕ್ರಮಿಕ ರೋಗ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿ,ಕಾಡು ಪ್ರಾಣಿಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತಹ ಕೆಲಸ ಮಾಡಬೇಕು ಎಂಬುದನ್ನು ತಿಳಿಸಿದರು.ಸಿಸಿಟಿವಿ ಅಳವಡಿಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ,ಉಪಕಾರ್ಯದರ್ಶಿ ಚಂದ್ರಶೇಖರ್,ಪೊಲೀಸ್ ಇನ್ ಸ್ಪೆಕ್ಟರ್ ನಂಜುಂಡಸ್ವಾಮಿ,ಇ.ಓ.ಉಮೇಶ್,ಜಿಲ್ಲಾ ಪಂಚಾಯತ್ ಇಂಜಿನಿಯರ್ ಮಂಜು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿ ಕಿರಣ್ ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.