ಯಾದಗಿರಿ ಜಿಲ್ಲೆಯ ಶಹಾಪುರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಅಧ್ಯಕ್ಷ ಭೀಮಣ್ಣಗೌಡ ಕಟ್ಟಿಮನಿ ಅವರು ಶಹಾಪುರ ಡಿ.ಸಿ.ಸಿ ಬ್ಯಾಂಕ್ ನಲ್ಲಿ ಕನಿಷ್ಠ ಮೂಲಭೂತ ಸೌಕರ್ಯ ಇಲ್ಲದೆ ಬ್ಯಾಂಕಿಗೆ ಬರುವ ಗ್ರಾಹಕರಿಗೆ ಕುಡಿಯಲು ನೀರು, ಶೌಚಾಲಯ ಕುಳಿತುಕೊಳ್ಳಲು ಕುರ್ಚಿ ಹಾಗೂ ಬ್ಯಾಂಕಿನ ಮುಂಭಾಗದಲ್ಲಿ ಒಂದಿಂಚು ನೆರಳು ಇಲದೇ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಆದರೂ ಬ್ಯಾಂಕಿನ ವ್ಯವಸ್ಥಾಪಕ ಕಣ್ಣಿಗೆ ಕಂಡರೂ ಕಾಣದಂತೆ ಇರುವುದು ನಾಚಿಕೆಗೇಡಿನ ಸಂಗತಿ ಎಂದು ಭೀಮಣ್ಣಗೌಡ ಕಟ್ಟಿಮನಿ ಹೇಳಿದರು.
ಡಿ.ಸಿ.ಸಿ ಬ್ಯಾಂಕಿನ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳು ಬ್ಯಾಂಕಿಗೆ ಬರುವ ಗ್ರಾಹಕರಿಗೆ ತೊಂದರೆ ಆಗದಂತೆ ಮುಂಜಾಗ್ರತೆ ವಹಿಸಿ,ಗ್ರಾಹಕರಿಗೆ ಟೋಕನ್ ನಂಬರ್ ಕೂಡುವುದು ಸರತಿ ಸಾಲಿನಲ್ಲಿ ಬರುವಂತೆ ಕ್ರಮ ಕೈಗೊಳ್ಳಬೇಕು ಮತ್ತು ಟೋಕನ್ ನಂಬರ್ ಕೂಗಿ ಕರೆಯುವ ವ್ಯವಸ್ಥೆ ಮಾಡಬೇಕು,ಒಂದು ವಾರದ ಒಳಗೆ ಗ್ರಾಹಕರಿಗೆ ತೊಂದರೆ ಆಗದಂತೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಒಂದು ವೇಳೆ ನಿರ್ಲಕ್ಷ್ಯ ತೋರಿದರೆ ಮುಂದಿನ ದಿನಗಳಲ್ಲಿ ನೂರಾರು ರೈತರು ಮತ್ತು ಕಾರ್ಮಿಕರು ಸೇರಿ ಡಿ.ಸಿ.ಸಿ ಬ್ಯಾಂಕ್ ಮುಂದೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಭೀಮಣ್ಣಗೌಡ ಕಟ್ಟಿಮನಿ ಎಚ್ಚರಿಕೆ ನೀಡಿದರು.ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಯಾದಗಿರಿ ಜಿಲ್ಲಾ ಅಧ್ಯಕ್ಷರಾದ ಭೀಮಣ್ಣಗೌಡ ಕಟ್ಟಿಮನಿ,ತಾಲೂಕ ಅಧ್ಯಕ್ಷರಾದ ನಾಗರಾಜ ರಾಕಂಗೇರಾ,ಪ್ರಧಾನ ಕಾರ್ಯದರ್ಶಿಯಾದ ಲಿಂಗಪ್ಪ ನಗನೂರು, ಉಪಾಧ್ಯಕ್ಷರಾದ ಯಲ್ಲಪ್ಪ,ಮಲ್ಲಪ್ಪ ನಾಯ್ಕೋಡಿ, ಬಸ್ಸು, ಶಿವಾಜಿ,ಶರಣು ವಡಗೇರಾ,ಕಾರ್ಮಿಕ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಮರಕಲ್,ಸಂಗಣ್ಣ ಗೌಡ,ರೈತ ಸಂಘದ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.