ಹನೂರು:ಪಟ್ಟಣದ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ವಾಲ್ಮೀಕಿ ಜಯಂತಿಯ ಪೂರ್ವ ಭಾವಿ ಸಭೆಯಲ್ಲಿ ಶಾಸಕ ಎಂ.ಆರ್.ಮಂಜುನಾಥ್ ಭಾಗಿಯಾಗಿ ಮಾತನಾಡಿ,ಅ.28ರಂದು ಸರ್ಕಾರದ ಆದೇಶದಂತೆ ಲೋಕೋಪಯೋಗಿ ಇಲಾಖೆ ಅಥಿತಿ ಗೃಹದಲ್ಲಿ ಬೆಳಗ್ಗೆ 10.30ಕ್ಕೆ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಗುತ್ತದೆ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಸರಳವಾಗಿ ಆಚರಿಸಲು ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸಮುದಾಯದ ಮುಖಂಡರು ಅದ್ದೂರಿಯಾಗಿ ವಾಲ್ಮೀಕಿ ಜಯಂತಿ ನಡೆಸಲು ಇಚ್ಚಿಸಿದ್ದಲ್ಲಿ ಮುಖಂಡರು ಸಭೆ ನೆಡೆಸಿ ಒಂದು ದಿನಾಂಕವನ್ನು ತೀರ್ಮಾನಿಸಿ ಬಳಿಕ ಆ ಕಾರ್ಯಕ್ರಮಕ್ಕೆ ನನ್ನ ಸಹಕಾರ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಗುರುಪ್ರಸಾದ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ನವೀನ್ ಮಠದ್,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕೇಶವ ಮೂರ್ತಿ,ಎಇಇ ಶಂಕರ್,ಇಒ ಉಮೇಶ್,ಬಿಇಓ ಶಿವರಾಜು,ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವ್,ಸಬ್ ಇನ್ಸ್ಪೆಕ್ಟರ್ ಮಧುಕುಮಾರ್,ನಿರ್ಮಿತಿ ಕೇಂದ್ರ ಚಿಕ್ಕಲಿಂಗಯ್ಯ, ಕಾರ್ಮಿಕ ಇಲಾಖೆ ನಿರೀಕ್ಷಕ ಪ್ರಸಾದ್,ಗ್ರಾಮ ಆಡಳಿತ ಅಧಿಕಾರಿ ಶೇಷಾಣ್ಣ,ಅಗ್ನಿ ಶಾಮಕ ದಳ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು,ಸಮುದಾಯದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.