ಯಾದಗಿರಿ ಜಿಲ್ಲೆಯ ವಡಗೇರಾ ತಾಲುಕಿನ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ಶಿಕ್ಷಕರಾದ ಸುರೇಶ ಕರಣಿಗಿ ಅವರು
ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮ ತನ್ನ ರಾಜ್ಯದ ಉಳಿವಿಗಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಪ್ರಪ್ರಥಮ ವೀರ ಮಹಿಳೆ ಸೂರ್ಯ ಮುಳುಗದ ನಾಡಿನವರು ಎಂದೇ ಕರೆಯಲ್ಪಡುತ್ತಿದ್ದ ಬ್ರಿಟಿಷರನ್ನು ಸದೆ ಬಡಿಯುವ ಮೂಲಕ ಇಡೀ ಜಗತ್ತೇ ನಿಬ್ಬೆರಗಾಗಿ ನೋಡುವಂತೆ ಮಾಡಿದ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಎಂದು ಸ್ಮರಿಸಿದರು ಕಿತ್ತೂರು ರಾಣಿ ಚೆನ್ನಮ್ಮ ದೇಶ ಸೇವೆಗಾಗಿ ತನ್ನ ಪ್ರಾಣಾರ್ಪಣೆ ಮಾಡಿದ ಕಾರಣಕ್ಕೆ ಈಗಲೂ ಸ್ಮರಿಸುತ್ತೇವೆ ತ್ಯಾಗ ಮಾಡಿದಂತಹವರು ಪೂಜಿಸಲ್ಪಡುತ್ತಾರೆ ಎಂಬುದಕ್ಕೆ ಕಿತ್ತೂರು ರಾಣಿ ಚನ್ನಮ್ಮ ಸಾಕ್ಷಿ ಎಂದು ತಿಳಿಸಿದರು.
