ಭದ್ರಾವತಿ: ನಗರದ ಲೋಯರ್ ಹುತ್ತಾ ನಿವಾಸಿ, ಹಿರಿಯ ಪತ್ರಕರ್ತ, ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ನಿವೃತ್ತ ಉದ್ಯೋಗಿ ನಿಟ್ಟೂರು ಶ್ರೀರಾಮ್ (79) ಮಂಗಳವಾರ ಸಂಜೆ ನಿಧನರಾದರು.
ಪತ್ನಿ ಮನೋನ್ಮಣಿ ಶ್ರೀರಾಮ್, ಇಬ್ಬರು ಸಹೋದರು ಸೇರಿದಂತೆ ಅಪಾರ ಬಂಧುಗಳನ್ನು ಹೊಂದಿದ್ದರು. ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಮೃತರು 5 ದಶಕಗಳ ಕಾಲ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಪತ್ರಿಕೆ ವಿತರಕರಾಗಿ, ಹಲವಾರು ಪತ್ರಿಕೆಗಳ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಇಂದು(ಬುಧವಾರ) ಹುತ್ತಾ ಹಿಂದೂ ರುದ್ರಭೂಮಿಯಲ್ಲಿ ಅಂತಿಮ ವಿಧಿ ವಿಧಾನಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿತು..
ಸಂತಾಪ : ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳ ವತಿಯಿಂದ ಹಾಗೂ ಶಾಸಕ ಬಿ ಕೆ ಸಂಗಮೇಶ್ವರ್ ಮತ್ತು ವಿವಿಧ ಮುಖಂಡರುಗಳು ಶ್ರೀರಾಮ್ ರವರ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ಸೂಚಿಸಲಾಯಿತು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.