ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾರ್ವಜನಿಕರ-ರೈತರ ಅನುಕೂಲಕ್ಕಾಗಿ ನಿರಂತರ ವ್ಯತ್ಯಯವಿಲ್ಲದ ವಿದ್ಯುತ್ ಕಲ್ಪಿಸಿ:ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ

ಯಾದಗಿರಿ:ಸರ್ಕಾರ ನಿಗಧಿಪಡಿಸಿದಂತೆ ಜಿಲ್ಲೆಯ ಸಾರ್ವಜನಿಕರ ಹಾಗೂ ರೈತರ ಅನುಕೂಲಕ್ಕಾಗಿ ನಿರಂತರ ಏಳು ತಾಸು ವಿದ್ಯುತ್ ಕಲ್ಪಿಸಲು ವಿಶೇಷ ಗಮನ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ಕೆ.ಪಿ.ಟಿ.ಸಿ.ಎಲ್ ಹಾಗೂ ಜೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ನಿರಂತರ ವಿದ್ಯುತ್ ವ್ಯತ್ಯಯದಿಂದಾಗಿ ಸಾರ್ವಜನಿಕರು ವಿಶೇಷವಾಗಿ ಗ್ರಾಮಾಂತರ ಜನರು ಹಾಗೂ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಿಕೊಂಡು ನಿರಂತರ ಏಳು ತಾಸು ವಿದ್ಯುತ್ ಕಲ್ಪಿಸಲು ಗಮನ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರ ಪ್ರದೇಶ ಹಾಗೂ ಕೈಗಾರಿಕೆಗಳಿಗೆ ನಿರಂತರ ನೀಡುವಂತಹ ವಿದ್ಯುತ್ ಗ್ರಾಮಾಂತರ ಪ್ರದೇಶದ ಜನರಿಗೆ ಹಾಗೂ ರೈತರಿಗೆ ಏಕೆ ವಿದ್ಯುತ್ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳಿಗೆ ವಿಚಾರಿಸಿದ ಸಚಿವರು ಯಾವುದೇ ರೀತಿಯ ಸಬೂಬು ನೀಡದೆ ಮಾನವೀಯ ನೆಲೆಯ ಮೇಲೆ ನಿರ್ಲಕ್ಷ್ಯ ತೋರದೆ ನಿರಂತರ ಏಳು ತಾಸು ವಿದ್ಯುತ್ ಕಲ್ಪಿಸಲು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ದುರಸ್ಥಿಯಿರುವ ಟ್ರಾನ್ಸ್ ಫಾರ್ ಮರ್ ತಕ್ಷಣ ಬದಲಾವಣೆ ಮಾಡಬೇಕು,ವಿಳಂಬ ಧೋರಣೆ ಅನುಸರಿಸದಿರಲು ಸೂಚಿಸಿದ ಅವರು ವಿದ್ಯುತ್ ಅಲ್ಪಾವಧಿ ಹಾಗೂ ಧೀರ್ಘಾವಧಿ ಸಮಸ್ಯೆಗಳ ಬಗ್ಗೆ ಆಯಾ ಸಹಾಯಕ ಅಭಿಯಂತರರು,ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ತಮಗೆ ವರದಿ ಸಲ್ಲಿಸಬೇಕು ಅದರಂತೆ ಆಯಾ ಶಾಸಕರ ಗಮನಕ್ಕೆ ತರಬೇಕು ಸರ್ಕಾರದ ಮಟ್ಟದಲ್ಲಿಯೂ ಪ್ರಯತ್ನಿಸಲಾಗುವುದು,ಅವಶ್ಯಕ ಅನುದಾನಬೇಕಾದಲ್ಲಿ ದೊರಕಿಸಲು ಪ್ರಯತ್ನಿಸಲಾಗುವುದು,ಅಧಿಕಾರಿಗಳು ನಿರ್ಲಕ್ಷ್ಯ ತೋರದೆ ಅದ್ಯತೆ ಮೇಲೆ ವಿದ್ಯುತ್ ಕಲ್ಪಿಸುವಂತೆ ಅವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ 220ಕೆ.ವಿ,110ಕೆವಿ ಹಾಗೂ 33ಕೆವಿ ಉಪಕೇಂದ್ರಗಳನ್ನು ವಿವಿಧ ತಾಲೂಕುಗಳಲ್ಲಿ ಸ್ಥಾಪಿಸಲಾಗಿದೆ ಆದರೂ ಕೂಡಾ ಇನ್ನೂವರೆಗೆ ನಿರಂತರ ವಿದ್ಯುತ್ ನೀಡಲಾಗುತ್ತಿಲ್ಲ ಜಿಲ್ಲೆಯಲ್ಲಿ 3 ಟ್ರಾನ್ಸ್ಫಾರ್ಮ್ರ್ ದುರಸ್ಥಿ ಕೇಂದ್ರಗಳು ಸಹ ಇದ್ದು, ಸಮಯಕ್ಕೆ ಸರಿಯಾಗಿ ಟ್ರಾನ್ಸ್ಫಾರ್ಮ್ರ್‌ಗಳ ದುರಸ್ಥಿ ಮಾಡಿಕೊಳ್ಳದಿರುವುದು,ಅಧಿಕಾರಿಗಳ ನಿರ್ಲಕ್ಷ್ಯದ ಕಾರಣವಾಗಿದೆ.ಕಾರಣ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸದೆ ತಕ್ಷಣ ನಾಗರಿಕರಿಗೆ ಸ್ಪಂದಿಸಬೇಕು ಉಪಕೇಂದ್ರಗಳ ವ್ಯಾಪ್ತಿಯಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು,ಜನರೊಂದಿಗೆ, ರೈತರೊಂದಿಗೆ,ಸೌಜನ್ಯವಾಗಿ ವರ್ತಿಸಬೇಕು, ಸಮಸ್ಯೆಗಳ ಬಗ್ಗೆ ಕಾರ್ಯನಿರ್ವಾಹಕ ಅಭಿಯಂತರರು,ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು,ಸೆಕ್ಷನ್ ಅಧಿಕಾರಿಗಳು ಹಾಗೂ ಲೈನ್‌ಮನ್‌ಗಳು,ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು,ಮುಂದಿನ ದಿನಗಳಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ನಿರಂತರ ಪರಿಶೀಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಸುರಪುರ ವಿಧಾನಸಭಾ ಶಾಸಕ ಶ್ರೀ ರಾಜಾ ವೆಂಕಟಪ್ಪನಾಯಕ,ಅಪರ ಜಿಲ್ಲಾಧಿಕಾರಿ ಶ್ರೀಶರಣಬಸಪ್ಪ ಕೋಟೆಪ್ಪಗೊಳ,ಕಲಬುರಗಿ ಕೆಪಿಟಿಇಎಲ್ ಸಿಇ ಗಿರಿಧರ್ ಕುಲ್ಕರ್ಣಿ,ಜೆಸ್ಕಾಂ ಇಇ ರಾಘವೇಂದ್ರ ಡಿ,ಸಹಾಯಕ ಆಯುಕ್ತರು ಹಂಪಣ್ಣ ಸಜ್ಜನ್,ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ:ಶಿವರಾಜ ಸಾಹುಕಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ