ಕರ್ನಾಟಕ ಸರ್ಕಾರವು ದ್ವಿತೀಯ ಪಿಯುಸಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ ಒಂದನ್ನು ಇದೀಗ ನೀಡಿದೆ ಮಾಸಿಕ ರೂ.16,738 ವೇತನ ನೀಡುವ ಡಾಟಾ ಎಂಟ್ರಿ ಆಪರೇಟರ್ ಪೋಸ್ಟ್‌ಗಳನ್ನು ಪ್ರತಿ ಪಂಚಾಯ್ತಿಗಳಲ್ಲಿ ನೇಮಕ ಮಾಡಲು ನಿರ್ದೇಶನ ನೀಡಿದೆ.
ಪ್ರತಿ ಗ್ರಾಮ ಪಂಚಾಯ್ತಿಯಲ್ಲಿ ಡಾಟಾ ಎಂಟ್ರಿ ಆಪರೇಟರ್ ನೇಮಕ,
ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಮಾಸಿಕ ರೂ.16,738 ವೇತನ.
ಅರ್ಹತೆಗಳೇನು?
ಕರ್ನಾಟಕ ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳಿಗೆ ಒಬ್ಬರಂತೆ ಒಟ್ಟು 5980 ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಸೂಚನೆ ನೀಡಿದೆ.
ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಕೆಲಸದ ಒತ್ತಡ, ಕಡತಗಳ ನಿರ್ವಹಣೆ ಹಿನ್ನೆಲೆಯಲ್ಲಿ ಈ ನೇಮಕಕ್ಕೆ ಸರ್ಕಾರ ಮುಂದಾಗಿದೆ ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿದೆ.
ನೇರ ನೇಮಕಾತಿ ಮುಖೇನ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲೆಗಳನ್ನು ಒಂದು ಜೇಷ್ಠತಾ ಘಟಕವೆಂದು ಪರಿಗಣಿಸಿ ಜಿಲ್ಲಾ ಪಂಚಾಯಿತಿಯ ಸಿಇಒ ಅಧ್ಯಕ್ಷತೆಯ ಸಮಿತಿಯಲ್ಲಿ ಆಯ್ಕೆ ಮಾಡಿಕೊಳ್ಳತಕ್ಕದ್ದು ಹಾಗೂ ಸದರಿ ಹುದ್ದೆಗೆ ಆಯ್ಕೆಯಾದ ನೌಕರರಿಗೆ 16,738 ರೂ ವೇತನ ನಿಗದಿಪಡಿಸಲಾಗಿದೆ.
ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಬಾಪೂಜಿ ಸೇವಾ ಕೇಂದ್ರದಲ್ಲಿ ಸಂಗ್ರಹವಾಗುವ ಮೊತ್ತದಿಂದ ವೇತನ ಪಾವತಿಸಬೇಕು ಎಂದು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರು ಸೂಚನೆ ನೀಡಿದ್ದಾರೆ.
ವರದಿ:ಶಿವರಾಜ ಸಾಹುಕಾರ
3 Responses
I am interested for data entry
Reporter job only sir
Useful to this job