ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಣೆ ಸೂಚನೆ

ಯಾದಗಿರಿ:ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ ಅದರ ಅಂಗವಾಗಿ ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಕಾರ್ಯಕ್ರಮದ ಸ್ವರೂಪ ಸಿದ್ದಪಡಿಸಲಾಗಿದೆ ಅದರಂತೆ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತವತಿಯಿಂದ ಈ ಕೆಳಕಂಡ ಅಂಶಗಳನ್ನು ಅನುಷ್ಠಾನಗೊಳಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವುದು ಹಾಗೂ ಸಂಬಂಧಪಟ್ಟ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಹಿಂದುಳಿದ ವರ್ಗಗಳ ಕಲ್ಯಾಣ,ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಶಿವರಾಜ ಎಸ್.ತಂಗಡಗಿ ಅವರ ಆದೇಶ ಅನ್ವಯ ಯಾದಗಿರಿ ಜಿಲ್ಲೆಯಾದ್ಯಂತ ಈ ಕೆಳಕಂಡ ಅಂಶಗಳನ್ನು ಸಂಬಂಧಪಟ್ಟ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶ್ರೀಮತಿ ಡಾ.ಸುಶೀಲ.ಬಿ ಅವರು ತಿಳಿಸಿದ್ದಾರೆ.ನವೆಂಬರ್ 1 ರಂದು ರಾಜ್ಯದ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಘೋಷ ವಾಕ್ಯವನ್ನು ಬರೆಯುವಂತೆ ನಾಗರಿಕರಲ್ಲಿ ಮನವಿ ಮಾಡುವುದು,ನವೆಂಬರ್ 1ರ ಬೆಳಿಗ್ಗೆ 9 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ) ನಾಡ ಗೀತೆಯನ್ನು ಪ್ರಸಾರ ಮಾಡಲಾಗುವುದು,ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರ ಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡ ಗೀತೆಗೂ ಗೌರವ ಸಲ್ಲಿಸಲು ಮನವಿ ಮಾಡುವುದು,ನವೆಂಬರ್ 1ರ ಸಂಜೆ 5 ಗಂಟೆಗೆ ನಿಮ್ಮ-ನಿಮ್ಮ ಜಿಲ್ಲೆಗಳ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸಲು ಮನವಿ ಮಾಡುವುದು ನವೆಂಬರ್ 1ರ ಸಂಜೆ 7 ಗಂಟೆಗೆ ನಿಮ್ಮ-ನಿಮ್ಮ ಜಿಲ್ಲೆಗಳ ಎಲ್ಲಾ ಗ್ರಾಮಗಳ ಮನೆಗಳ ಮುಂದೆ,ಕಛೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗುವುದು.
ಎಲ್ಲಾ ಅಂಶಗಳ ಬಗ್ಗೆ ಜಿಲ್ಲಾಡಳಿತ ಸೂಕ್ತ ಸುತ್ತೋಲೆಗಳನ್ನು ಹೊರಡಿಸಿ,ಜಿಲ್ಲೆಯ ಎಲ್ಲಾ ನಾಗರಿಕರ ಹಾಗೂ ಸಂಘ ಸಂಸ್ಥೆಗಳ ಸಹಯೋಗ ಪಡೆದು ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ:ಶಿವರಾಜ ಸಾಹುಕಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ