ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಗ್ರಾಮಾಂತರ ಪ್ರದೇಶದ ರೈತರು ಸರ್ಕಾರದಿಂದ ಸಿಗುವ ಸವಲತ್ತು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.
ಹನೂರು ತಾಲೂಕಿನ ರಾಮಾಪುರ ಹೋಬಳಿಯ ಮಾಟಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಡ್ಡರ ದೊಡ್ಡಿ ಗ್ರಾಮದಲ್ಲಿ ರೈತ ಫಲಾನುಭವಿಗಳಿಗೆ ರಾಸುಗಳು ಮತ್ತು ರಸಗೊಬ್ಬರ ವಿತರಣೆ ಮಾಡಿದರು.
2023 24 ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಸುಸ್ಥಿರ ಕೃಷಿ ಅಭಿಯಾನ ಯೋಜನೆಯಡಿ ಮಳೆಯಾಶ್ರಿತ ಪ್ರದೇಶದಲ್ಲಿ ಬರುವ ರೈತ ಫಲಾನುಭವಿಗಳು ಕೃಷಿ ಇಲಾಖೆ ವತಿಯಿಂದ ನೀಡುತ್ತಿರುವ ರಾಶಿಗಳನ್ನು ಹಾಗೂ ರೈತರಿಗೆ ಬೇಕಾಗಿರುವ ರಸಗೊಬ್ಬರಗಳನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ ಇದನ್ನು ಪಡೆದು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ರೈತರಿಗೆ ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕರಾದ ಸುಂದರಮ್ಮ ಕೃಷಿ ಅಧಿಕಾರಿ ವೆಂಕಟ್ ನಾಯ್ಕ ರೈತರು ಹಾಗೂ ಮುಖಂಡರು ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.