ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಂಡಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಕನ್ನಡ ರಾಜ್ಯೋತ್ಸವ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ಇಂದು ನಾಡಗೀತೆ ಹಾಡುವ ಮೂಲಕ ಕನ್ನಡ ಬಾವುಟ ಧ್ವಜಾರೋಹಣ ಮಾಡಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು.ಈ ಸಂಧರ್ಭದಲ್ಲಿ ವಿವಿಧ ಮಹಿಳಾ ಘಟಕದ ಸದಸ್ಯರುಗಳಿಗೆ ರಂಗೋಲಿ ಸ್ಪರ್ಧೆ ಹಾಗೂ ಇದರಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು ಇತ್ತೀಚಿಗೆ ಗ್ರಾಮ ಪಂಚಾಯಿತಿಗೆ ಆಗಮಿಸಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ಅನೇಕ ಚಟುವಟಿಕೆ ಕಾರ್ಯಕ್ರಮಗಳನ್ನು ಮಾಡಿ ಪಂಚಾಯಿತಿಯಲ್ಲಿ ಕಾರ್ಯ ಪ್ರವೃತ್ತಿಯನ್ನು ಪ್ರದರ್ಶಿಸಿ ಗ್ರಾಮಸ್ಥರ ಮನ ಸೆಳೆದಿದ್ದಾರೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನು ಮಾಡಿ ಗ್ರಾಮದ ಅಭಿವೃದ್ಧಿ ಮಾಡಬೇಕೆಂದು ಗ್ರಾಮಸ್ಥರ ಆಶಯವಾಗಿದೆ. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧಾ,ಉಪಾಧ್ಯಕ್ಷೆ ಹಬೀಬಾ ಖಾನಂ,ಗ್ರಾಮ ಪಂಚಾಯಿತಿ ಸದಸ್ಯರಾದ ಶಾಹುಲ್ ಅಹ್ಮದ್,ಜುಲ್ಫಿಕರ್ ಅಹ್ಮದ್,ನಾಗರಾಜು,ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ಬಂಡಳ್ಳಿ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ