ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

ಕನ್ನಡ ರಾಜ್ಯೋತ್ಸವದ ಅಂಗವಾಗಿ 2023ರ ನವೆಂಬರ್‌‌‌ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ ಲೈನ್‌ www.kannadapustakapradhikara.com/books (ನಮ್ಮ ಪ್ರಕಟಣೆಗಳು ವಿಭಾಗ) ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.

ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ