ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸಂಘಟನೆಯೇ ನಿಮ್ಮ ಶಕ್ತಿ ಶಾಸಕ ಎಂ.ಆರ್ ಮಂಜುನಾಥ್

ಹನೂರು:ವಾಲ್ಮೀಕಿ ಜಯಂತಿ ಭೂಮಿ ಇರುವವರೆಗೂ ಅವರ ಗ್ರಂಥ ಅಜರಾಮರ ಸಮುದಾಯ ಸಹ ಇತರೆ ಸಮುದಾಯಗಳಂತೆ ಮುಖ್ಯ ವಾಹನಿಗೆ ಬರಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು.
ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಸಮುದಾಯದ ವತಿಯಿಂದ ಆಯೋಜಿಸಲಾಗಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಅವರು ಮಾತನಾಡಿದರು.
ರಾಮಾಯಣ ಅತ್ಯಂತ ಪ್ರಮುಖ ಸಂಸ್ಕೃತ ಭಾಷೆಯ ಆದಿಕವಿ ಗ್ರಂಥ ರಾಮಾಯಣ ರಚಿಸಿದ ವಾಲ್ಮೀಕಿ ಇತಿಹಾಸ ಲೇಖನಗಳು ಇತಿಹಾಸ ಪುಟಗಳಲ್ಲಿ ಸಾರಿ ಹೇಳುತ್ತಿದೆ ಪಟ್ಟಣದಲ್ಲಿ ವಿಜೃಂಭಣೆಯಿಂದ ಇಂದು ಸಮುದಾಯದವರು ವಾಲ್ಮೀಕಿ ಜಯಂತಿಯ ಕಾರ್ಯಕ್ರಮವನ್ನು ಆಯೋಜನೆ ಮಾಡಿರುವುದು ಶ್ಲಾಘನೀಯ ವಿಚಾರವಾಗಿದೆ ಪ್ರತಿಯೊಬ್ಬರೂ ಸಮಾಜದ ಏಳಿಗೆಗಾಗಿ ದುಡಿದ ಮತ್ತು ಮಹಾನ್ ಗ್ರಂಥ ರಚನೆ ಮಾಡಿದ ವಾಲ್ಮೀಕಿ ಅವರ ಜೀವನ ಚರಿತ್ರೆಯನ್ನು ಸಮುದಾಯದ ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಉತ್ತಮ ಸಂದೇಶ ನೀಡುವುದರ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಜೊತೆಗೆ ರಾಜಕೀಯವಾಗಿ ಗ್ರಾಮ ಮತ್ತು ತಾಲೂಕು ಜಿಲ್ಲೆ ಹಾಗೂ ರಾಜ್ಯ ರಾಷ್ಟ್ರಮಟ್ಟದಲ್ಲಿ ಪ್ರತಿಯೊಬ್ಬರೂ ಗುರುತಿಸಿಕೊಳ್ಳುವ ಮೂಲಕ ಸಮುದಾಯವನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಶ್ರಮಿಸುವ ಮೂಲಕ ಪ್ರತಿಯೊಬ್ಬರು ಶ್ರಮಿಸಬೇಕಾಗಿದೆ ಬೆಳಗಾವಿ ಸಾಹುಕಾರರು ರಾಜಕೀಯ ಚಿತ್ರಣವನ್ನೇ ಬದಲಾವಣೆ ಮಾಡುವ ರಾಜಕೀಯ ಚತುರರು ಹೀಗಾಗಿ ಶೋಷಿತ ವರ್ಗದ ಸಣ್ಣಪುಟ್ಟ ಸಮುದಾಯಗಳಲ್ಲಿ ಅವಶ್ಯಕತೆ ಇರುವ ಸಮುದಾಯದವರು ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಲು ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸವನ್ನು ನೀಡುವುದರ ಮೂಲಕ ಪ್ರತಿಯೊಬ್ಬರು ಶ್ರಮಿಸಬೇಕಾಗಿದೆ ಹೀಗಾಗಿ ಇಂದು ನನಗೆ ನೀಡಿರುವ ಮನವಿಯನ್ನು ಮುಂದಿನ ವಾಲ್ಮೀಕಿ ಜಯಂತಿಯ ಒಳಗೆ ಬಗೆಹರಿಸಲು ಶ್ರಮಿಸುತ್ತೇನೆ ನನಗೆ ನೀಡಿರುವ ಅವಕಾಶವನ್ನು ಬಳಸಿಕೊಂಡು ತಮ್ಮ ಸೇವೆ ಮಾಡಲು ಇದೊಂದು ಸುವರ್ಣ ಅವಕಾಶ ನನಗೆ ಸಿಕ್ಕಿದೆ ಹೀಗಾಗಿ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಸಿಗುವ ಸೌಲತ್ತು ನಿಮಗೆ ತಲುಪಿಸಲು ಶ್ರಮಿಸುತ್ತೇನೆ ಎಂದರು.
ಭಾವಚಿತ್ರ ಮೆರವಣಿಗೆ:ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಆರಂಭಿಸಿ ಅವರಣದಿಂದ ವಾಲ್ಮೀಕಿ ಅವರ ಭಾವಚಿತ್ರವನ್ನು ವಾಹನದಲ್ಲಿ ಇರಿಸಿ ವಿಜೃಂಭಣೆಯಿಂದ ವಾದ್ಯ ಮೇಳ ಕೊಂಬು ಕಹಳೆಗಳ ಮೂಲಕ ಯುವಕರು ಕುಣಿದು ಕುಪ್ಪಳಿಸಿ ರಸ್ತೆ ಉದ್ದಕ್ಕೂ ವಾಲ್ಮೀಕಿ ಅವರ ಗುಣಗಾನ ಮಾಡುವ ಮೂಲಕ ನೆರೆದಿದ್ದ ಜನರಿಗೆ ರಂಜಿಸಿದರು.
ಈ ಸಂದರ್ಭದಲ್ಲಿ ವಾಲ್ಮೀಕಿ ಆಚರಣಾ ಸಮಿತಿ ಅಧ್ಯಕ್ಷರಾದ ಪುಟ್ಟವೀರ ನಾಯಕ,ಮುಖ್ಯ ಭಾಷಣಕಾರರಾದಾ ಉದ್ದನೂರು ಮಹಾದೇವ್, ಪೊನ್ನಾಚ್ಚಿ ರಾಜಣ್ಣ,ಕೊಳ್ಳೆಗಾಲ ನಾಯಕ ಜನಾಂಗದ ಅಧ್ಯಕ್ಷ ಜಗದೀಶ್ , ದೇವಪ್ಪನಾಯಕ,ಸೋಮಣ್ಣ,ಪಟ್ಟಣ ಪಂಚಾಯಿತಿ ಸದಸ್ಯರಾದ ಮಹೇಶ್,ಆನಂದ್ ಕುಮಾರ್, ಮುಂತಾಜ್ ಬೇಗಮ್,ಮಹೇಶ್ ನಾಯಕ್, ಮಂಜುಳ ಸತೀಶ್,ಪವಿತ್ರಾ ಪ್ರಸನ್ನ ಹಾಗೂ  ಸಮುದಾಯದ ಮುಖಂಡರು ಹಾಗೂ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು .
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ