ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಅಂಗನವಾಡಿ ಕೇಂದ್ರ -1ರ ಕಟ್ಟಡ ನಿರ್ಮಾಣ ಕಾಮಗಾರಿಯ ಉದ್ಘಾಟನಾ ಸಮಾರಂಭ

ಯಾದಗಿರಿ:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ 2022-23ನೇ ಸಾಲಿನ ಮಹತ್ವಕಾಂಕ್ಷಿ ಯೋಜನೆಯಡಿ ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಅಂಗನವಾಡಿಯ ಕೇಂದ್ರ 01ರ ಕಟ್ಟಡ ನಿರ್ಮಾಣ ಕಾಮಗಾರಿ ಉದ್ಘಾಟವನ್ನು 2023ರ ನವೆಂಬರ್ 6ರ ಸೋಮವಾರ ರಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಹಾಗೂ ಯಾದಗಿರಿ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪಗೌಡ ದರ್ಶನಾಪೂರ ಅವರು ಉದ್ಘಾಟಿಸುವರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಅಂಗವಿಕಲರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶ್ರೀಮತಿ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಘನ ಉಪಸ್ಥಿತಿಯಲ್ಲಿ ನೆರವೇರಲಿದೆ.
ಯಾದಗಿರಿ ವಿಧಾನಸಭಾ ಶಾಸಕ ಶ್ರೀ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.ರಾಯಚೂರು ಲೋಕಸಭಾ ಸದಸ್ಯರು ಶ್ರೀ ರಾಜಾ ಅಮರೇಶ್ವರ ನಾಯಕ,ವಿಧಾನ ಪರಿಷತ್ತು ಸದಸ್ಯರು ಶ್ರೀ ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಬಿ.ಪಾಟೀಲ್,ಶ್ರೀ ಶಶೀಲ್ ಜಿ.ನಮೋಶಿ,ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ, ಬೆಂಗಳೂರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸದಸ್ಯರಾದ ಶ್ರೀ ಶಶಿಧರ್ ಕೋಸುಂಬೆ, ದೋರನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀಮತಿ ಚಂದ್ರಕಲಾ ದೊರೆ ಮುಖ್ಯ ಅತಿಥಿಗಳಾಗಿ ಆಗಮಿಸುವರು.ಜಿಲ್ಲಾಧಿಕಾರಿ ಡಾ.ಸುಶೀಲ.ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಗರಿಮಾ ಪನ್ವಾರ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ವೀರನಗೌಡ, ಶಹಾಪೂರ ಶಿಶು ಅಭಿವೃದ್ಧಿ ಅಧಿಕಾರಿ ಶ್ರೀಮತಿ ಮೀನಾಕ್ಷಮ ಪಾಟೀಲ್,ಯಾದಗಿರಿ ಜಿಲ್ಲಾ ನಿರ್ಮಿತಿ ಕೇಂದ್ರ ಯೋಜನಾ ವ್ಯವಸ್ಥಾಪಕರು ಕಿರಣ ಕುಮಾರ ಹೂಗಾರ ಪಾಲ್ಗೊಳ್ಳುವರು.
ದೋರನಹಳ್ಳಿ ಗ್ರಾಮದ ಸರ್ವ ಸದಸ್ಯರು ಮತ್ತು ಸಂಘ-ಸಂಸ್ಥೆಗಳು ಹಾಗೂ ಗ್ರಾಮದ ಸಮಸ್ಥ ನಾಗರಿಕರ ವತಿಯಿಂದ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಯಾದಗಿರಿ ಜಿಲ್ಲಾ ನಿರ್ಮಿತಿ ಕೇಂದ್ರ ವ್ಯವಸ್ಥಾಪಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ