ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಹತ್ತಿರ ಹಾಯ್ದು ಹೋಗುವ ಆಲಮಟ್ಟಿ ಎಡದಂಡೆ ನಾಲೆ ಕಾಲುವೆ ಒಡೆದು ರೈತರ ಜಮೀನಿನೊಳಗ ನುಗ್ಗಿ ಹರಿಯುತ್ತಿದೆ.ಕೆಂಭಾವಿ ಹೋಬಳಿ ಘಟಕದಲ್ಲಿ ಬರುವ ಕೆ.ಬಿ.ಜೆ.ಎನ್.ಎಲ್ ಕಾಲುವೆಯಲ್ಲಿ ಹೂಳು ತೆಗೆಯದೇ ಇರುವುದರಿಂದ ಕಾಲುವೆಯಲ್ಲಿ ಗಿಡಗಂಟಿಗಳು ತುಂಬಿ ರೈತರ ಹೊಲ ಗದ್ದೆಗಳಿಗೆ ನೀರು ಹರಿದು ಬರುತ್ತಿದ್ದು ಸಂಪೂರ್ಣವಾಗಿ ಬೆಳೆ ಹಾನಿಯಾಗಿದ್ದು ಇಳುವರಿ ಕಡಿಮೆಯಾಗುತ್ತಿದ್ದು ಬೆಳೆಗೆ ಹಾಕಿರುವ ರಸಗೊಬ್ಬರ ಹಾಗೂ ಕೀಟನಾಶಕ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದು ರೈತರಿಗೆ ಅಪಾರ ನಷ್ಟ ಉಂಟಾಗುತ್ತಿದೆ.ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಇದಕ್ಕೆ ಸಂಬಂಧಪಟ್ಟ ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಯಾರೂ ಇತ್ತ ಕಡೆ ಗಮನ ಹರಿಸುತ್ತಿಲ್ಲ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತ್ತು ಮಾಡಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ವರದಿ ರಾಜಶೇಖರ ಮಾಲಿ ಪಾಟೀಲ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.