ಯಾದಗಿರಿ:ರಾಜ್ಯದಾದ್ಯಂತ ಸಕಾಲಕ್ಕೆ ಮಳೆಯಾಗದ ಕಾರಣ ರಾಜ್ಯಾದ್ಯಂತ ಅನೇಕ ಜಿಲ್ಲೆಗಳ ತಾಲೂಕುಗಳನ್ನು ಬರ ಪೀಡಿತ ಎಂದು ರಾಜ್ಯ ಸರಕಾರ ಘೋಷಣೆ ಮಾಡಿದ್ದರೂ ಜಿಲ್ಲಾ ಆಡಳಿತ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಲ್ಲಣ್ಣ ಗೌಡ ಹಗರಟಗಿ ಹೇಳಿದರು.ಅದರಲ್ಲಿ ನಮ್ಮ ಯಾದಗಿರಿ ಜಿಲ್ಲೆ ಕೂಡ ಒಂದಾಗಿದೆ ಬರಗಾಲ ಘೋಷಣೆಯಾಗಿ ಸುಮಾರು ಒಂದು ತಿಂಗಳು ಕಳೆದರೂ ಕೂಡಾ ನಮ್ಮ ಯಾದಗಿರಿ ಜಿಲ್ಲೆಗೆ ಸುಮಾರು 9 ಕೋಟಿ ಅನುದಾನ ಬಿಡುಗಡೆಯಾದರೂ ಕೂಡಾ ಇನ್ನೂ ರೈತರಿಗೆ ಬೆಳೆ ಪರಿಹಾರ ನೀಡದೇ ಇರುವುದು ಬೇಸರದ ಸಂಗತಿಯಾಗಿದೆ ಮಳೆ ಇಲ್ಲದೆ ಬೆಳೆ ನಷ್ಟಕ್ಕೆ ಸಿಲುಕಿ ರೈತರು ಬಹಳಷ್ಟು ಸಂಕಷ್ಟಕ್ಕೀಡಾಗಿದ್ದಾರೆ.
ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಆಡಳಿತ ಆದಷ್ಟು ಬೇಗನೆ ರೈತರಿಗೆ ತೊಂದರೆಯಾಗದಂತೆ ಹಂತ ಹಂತವಾಗಿ ರೈತರ ಖಾತೆಗೆ ಬೆಳೆ ಪರಿಹಾರದ ಕೊಡಿಸಲು ಮುಂದಾಗಬೇಕು ಎಂದು ರೈತರು ನೋವು ಹಂಚಿಕೊಂಡರು.ಇದೇ ಸಂದರ್ಭದಲ್ಲಿ ಮಾತನಾಡಿದ ಯಾದಗಿರಿ ಜಿಲ್ಲೆಯ ರೈತ ಸಂಘದ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷರಾದ ಮಲ್ಲಣ್ಣ ಗೌಡ ಹಗರಟಗಿ ಅವರು ಮುಂದಿನ ದಿನಗಳಲ್ಲಿ ರೈತರಿಗೆ ಬೆಳೆ ಪರಿಹಾರ ನೀಡಿದೆ ಇದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಹಾಗೂ ಜಿಲ್ಲಾ ಆಡಳಿತ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ವರದಿ ರಾಜಶೇಖರ ಮಾಲಿ ಪಾಟೀಲ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.