ಮುಂಡಗೋಡ:ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಇಂದು ಕರೀಂ ಅಸಾದಿ ಆಡಳಿತ ಅಧಿಕಾರಿಗಳು, ಜಿಲ್ಲಾ ಯೋಜನಾ ನಿರ್ದೇಶಕರು , ಜಿಲ್ಲಾ ಪಂಚಾಯ್ತಿ ಹಾಗೂ ಜಗದೀಶ್ ಕಮ್ಮಾರ್ ಕಾರ್ಯನಿರ್ವಹಣಾ ಅಧಿಕಾರಿಗಳು ತಾಲೂಕ ಪಂಚಾಯತ್ ಮುಂಡಗೋಡ ಇವರುಗಳ ನೇತೃತ್ವದಲ್ಲಿ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ನರೇಗಾ ಯೋಜನೆ ಅಡಿಯಲ್ಲಿ ಯಾವ ಯಾವ ಇಲಾಖೆಗಳು ಎಷ್ಟು ಪ್ರಮಾಣದಲ್ಲಿ ಅಭಿವೃದ್ದಿ ಸಾಧಿಸಿವೆ ಎಂಬುದರಲ್ಲಿ ವಿಸ್ಕೃತ ಚರ್ಚೆ ನಡೆಸಲಾಯಿತು ಇದೇವೇಳೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
