ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಅಳ್ಳೋಳಿ ಗ್ರಾಮ ಪಂಚಾಯತಿ ಮಟ್ಟದ ಶಾಲಾ ಮಕ್ಕಳ ಗಣಿತ ಕಲಿಕಾ ಸ್ಪರ್ಧೆ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು ಈ ಕಾರ್ಯಕ್ರಮದಲ್ಲಿ ಮಾತನ್ನಾಡಿದ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳಾದ ಶ್ರೀ ಜಕ್ಕಪ್ಪ ಪೂಜಾರಿರವರು ಕಾರ್ಯಕ್ರಮದ ಕುರಿತು ಮಾತನ್ನಾಡಿ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನ ಹರಿಸಿ ಉತ್ತಮ ಶಿಕ್ಷಣ ಪಡೆದು ನಿಮ್ಮ ಶಾಲೆಗೆ ನಿಮ್ಮ ಗ್ರಾಮಕ್ಕೆ ಹಾಗೂ ನಿಮ್ಮ ಮನೆಗೆ ಒಳ್ಳೆಯ ಹೆಸರು ತರಬೇಕು ಎಂದು ವಿದ್ಯಾರ್ಥಿಗಳಿಗೆ ಆತ್ಮ ವಿಶ್ವಾಸ ತುಂಬಿದರು ನಂತರ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರುಗಳು,ಸಹ ಶಿಕ್ಷಕರು, ಪಂಚಾಯತಿ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ವರದಿ:ರಾಜೇಂದ್ರ. ಎನ್.ಕೊಲ್ಲೂರು
