ಯಾದಗಿರಿ:ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಇದೇ ನವೆಂಬರ್ 24, 25 ಮತ್ತು 27 ರಂದು ಯಾದಗಿರಿ ಜಿಲ್ಲೆಯಲ್ಲಿ ಕೈಗೊಳ್ಳಲಿರುವ ಪ್ರವಾಸ ಕಾರ್ಯಕ್ರಮದ ವಿವರ ಈ ಕೆಳಗಿನಂತೆ ಇದೆ ಎಂದು ಮಾನ್ಯ ಸಚಿವರ ಆಪ್ತಕಾರ್ಯದರ್ಶಿಗಳು ತಿಳಿಸಿದ್ದಾರೆ.
ನವೆಂಬರ್ 24ರ ಶುಕ್ರವಾರ ರಂದು ಬೆಳಿಗ್ಗೆ 6.30 ಗಂಟೆಗೆ ಕಲಬುರಗಿದಿಂದ ಹೊರಟು ಬೆಳಿಗ್ಗೆ 9 ಗಂಟೆಗೆ ರಾಯಚೂರು ಆಗಮಿಸಿ ನಂತರ ಬೆಳಿಗ್ಗೆ 10 ಗಂಟೆಗೆ ರಾಯಚೂರು ಜಿಲ್ಲಾ ಕೈಗಾರಿಕಾ ಕೇಂದ್ರ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿ. ಮತ್ತು ಕರ್ನಾಟಕ ರಾಜ್ಯ ಗ್ರಾಮೋದ್ಯೋಗ ಮಂಡಳಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸುವರು ಅಂದು ಮದ್ಯಾಹ್ನ 12 ಗಂಟೆಗೆ ರಾಯಚೂರು ರಸ್ತೆ ಮೂಲಕ ಹೊರಟು ಮದ್ಯಾಹ್ನ 2 ಗಂಟೆಗೆ ಶಹಾಪೂರಕ್ಕೆ ಆಗಮಿಸಿ ಶಹಾಪೂರ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು ಹಾಗೂ ಸಾರ್ವಜನಿಕ ಕುಂದು ಕೊರತೆಗಳ ವಿಚಾರ ನಡೆಸುವರು. ಸಂಜೆ 5 ಗಂಟೆಗೆ ಶಹಾಪೂರದಿಂದ ಹೊರಟು ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ನವೆಂಬರ್ 25ರ ಶನಿವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿದಿಂದ ಹೊರಟು ಬೆಳಿಗ್ಗೆ 10.30 ಗಂಟೆಗೆ ಸುರಪುರ ತಾಲ್ಲೂಕು ಮಲ್ಲಾ.ಬಿ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಹಾಗೂ ವೃತ್ತ ಕಾರ್ಯಕ್ರಮ ಉದ್ಘಾಟಿಸುವರು ನಂತರ ಬೆಳಿಗ್ಗೆ 11 ಗಂಟೆಗೆ ಮಲ್ಲಾ.ಬಿ ದಿಂದ ಹೊರಟು ಮಧ್ಯಾಹ್ನ 12 ಗಂಟೆಗೆ ದೇವದುರ್ಗ ಕ್ರಾಸ್ ಹತ್ತಿರ ಹತ್ತಿಗುಡೂರುನಲ್ಲಿ ಕನ್ನಡ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು ಮಧ್ಯಾಹ್ನ 12.15 ಗಂಟೆಗೆ ಹತ್ತಿಗುಡೂರುದಿಂದ ಹೊರಟು ಮಧ್ಯಾಹ್ನ 12.30 ಗಂಟೆಗೆ ಶಹಾಪೂರ ನಗರದಲ್ಲಿ ಹಳಿಸಗರದಲ್ಲಿರುವ ಮಾಗನಗೇರಾ ಮಠದ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.
ಅಂದು ಮಧ್ಯಾಹ್ನ 1 ಗಂಟೆಗೆ ಶಹಾಪುರ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು ಹಾಗೂ ಸಾರ್ವಜನಿಕರ ಕುಂದು ಕೊರತೆಗಳ ವಿಚಾರಣೆ ನಡೆಸುವರು ಸಂಜೆ 5 ಗಂಟೆಗೆ ಶಹಾಪುರದಿಂದ ಹೊರಟು ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ನವೆಂಬರ್ 26ರ ಭಾನುವಾರ ರಂದು ಬೆಳಿಗ್ಗೆ 10 ಗಂಟೆಯಿAದ ಕಲಬುರಗಿ ನಗರದ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು ಹಾಗೂ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸುವರು ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ನವೆಂಬರ್ 27ರ ಸೋಮವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿದಿಂದ ಹೊರಟು ಬೆಳಿಗ್ಗೆ 10 ಗಂಟೆಗೆ ಶಹಾಪುರಕ್ಕೆ ಆಗಮಿಸಿ ಬೆಳಿಗ್ಗೆ 11 ಗಂಟೆಗೆ ಶಹಾಪೂರದ ಅರಬೋಳ ಕಲ್ಯಾಣ ಮಂಟಪದಲ್ಲಿ ಜನತಾದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸುವರು ನಂತರ ಸಂಜೆ 5 ಗಂಟೆಗೆ ಶಹಾಪೂರದಿಂದ ಹೊರಟು ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ನವೆಂಬರ್ 28ರ ಮಂಗಳವಾರ ರಂದು ಮಧ್ಯಾಹ್ನ 1.5 ಗಂಟೆಗೆ ಕಲಬುರಗಿದಿಂದ ಹೊರಟು ವಿಮಾನದ ಮೂಲಕ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣ ಬೆಳೆಸುವರು ಎಂದು ಅವರು ತಿಳಿಸಿದ್ದಾರೆ.
ವರದಿ:ಶಿವರಾಜ ಸಾಹುಕಾರ ವಡಗೇರಾ