ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ-ಕರಡು ಮತದಾರರ ಪಟ್ಟಿ ಪ್ರಕಟ

ಡಿಸೆಂಬರ್ 09 ರ ವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ:ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ

ಯಾದಗಿರಿ:ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ ಯಾದಗಿರಿ ಜಿಲ್ಲೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಕಲಬುರಗಿ ಪ್ರಾದೇಶಿಕ ಆಯುಕ್ತರು ಪ್ರಚುರಪಡಿಸಿದ್ದು, ಈ ಕರಡು ಮತದಾರರ ಪಟ್ಟಿಯನ್ನು ಯಾದಗಿರಿ ಜಿಲ್ಲಾಧಿಕಾರಿಗಳ ಕಾರ್ಯಾಲಯ ಮತ್ತು ಸಹಾಯಕ ಆಯುಕ್ತರ ಕಾರ್ಯಾಲಯ ಹಾಗೂ ಜಿಲ್ಲೆಯ ಎಲ್ಲ ತಹಸೀಲ್ದಾರರ ಕಾರ್ಯಾಲಯಗಳಲ್ಲಿ ಹಾಗೂ ಮತಗಟ್ಟೆಗಳಲ್ಲಿ ಪ್ರಚುರಪಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶ್ರೀ ಶರಣಬಸಪ್ಪ ಕೋಟೆಪ್ಪಗೊಳ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಈ ಕುರಿತು ಪತ್ರಿಕಾಗೋಷ್ಠಿ ಹಾಗೂ ರಾಜಕೀಯ ಪಕ್ಷದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಈ ಚುನಾವಣೆಗೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲೆಯಲ್ಲಿ 14295 ಅರ್ಜಿಗಳು ಸ್ವೀಕೃತಗೊಂಡಿದ್ದು ಈ ಪೈಕಿ 9896 ಪುರುಷರು ಹಾಗೂ 4395 ಮಹಿಳೆಯರು ಮತ್ತು ಇತರೆ 4 ಅರ್ಜಿಗಳು ಸ್ವೀಕೃತವಾಗಿವೆ 402 ಅರ್ಜಿಗಳು ತಿರಸ್ಕೃತಗೊಂಡಿದ್ದು ಈ ಪೈಕಿ 271 ಪುರುಷರ ಹಾಗೂ 132 ಮಹಿಳೆಯರ ಅರ್ಜಿಗಳು ತಿರಸ್ಕೃತಗೊಂಡಿವೆ ಕರಡು ಮತದಾರರ ಪಟ್ಟಿ ಅನ್ವಯ ಸದ್ಯ 13,892 ಅರ್ಜಿಗಳು ಸರಿಯಾಗಿವೆ.
ಈ ಕರಡು ಮತದಾರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಇದೇ ದಿನಾಂಕ 23-11-2023 ರಿಂದ ದಿನಾಂಕ 09-12-2023 ರವೆರೆಗೆ ಅವಕಾಶ ಕಲ್ಪಿಸಲಾಗಿದೆ. ತಮ್ಮ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಾರ್ವಜನಿಕರು ಮತದಾರ ನೋಂದಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರು ಕಲಬುರಗಿ ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ವರ್ಷದಲ್ಲಿ ಒಟ್ಟು 5159 ಮತದಾರರಿದ್ದರು. ಈ ಬಾರಿ ಜಿಲ್ಲಾಡಳಿತದ ಸೂಕ್ತ ಕ್ರಮ,ಬೂತ್ ಮಟ್ಟದ ಅಧಿಕಾರಿಗಳಿಂದ,ನೋಡಲ್ ಅಧಿಕಾರಿಗಳ ನೇಮಕದಿಂದ ಹಾಗೂ ಸಮೂಹ ಮಾಧ್ಯಮಗಳ ಮೂಲಕದ ಜಾಗೃತಿಯಿಂದಾಗಿ ಮತದಾರರ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಇನ್ನು ಅರ್ಜಿ ಸಲ್ಲಿಸದೆ ಬಾಕಿ ಉಳಿದಿರುವ ಅರ್ಹ ಮತದಾರರು ಅರ್ಜಿಯನ್ನು ಕೊಟ್ಟಿಲ್ಲದಿದ್ದಲ್ಲಿ ಅರ್ಜಿ ಸಲ್ಲಿಸಬೇಕು. ಚುನಾವಣಾ ಆಯೋಗದ ನಿರ್ದೇಶನದಂತೆ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಚುನಾವಣೆ ತಹಶೀಲ್ದಾರ ಸಂತೋಷರಾಣಿ,ರಾಜಕೀಯ ಪಕ್ಷಗಳ ಮುಖಂಡರಾದ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಈಟೇ,ಬಿಜೆಪಿಯ ಕಾರ್ಯದರ್ಶಿ ಶಂಕರ ಸೋನಾರ್,ಬಿಎಸ್ಪಿ ಪಕ್ಷದ ಜಿಲ್ಲಾಧ್ಯಕ್ಷ ಅಬ್ದುಲ್ ಕರೀಮ್ ದಾದೂ,ಎಎಪಿ ಪಕ್ಷದ ಜಿಲ್ಲಾಧ್ಯಕ್ಷ ಮರಗಪ್ಪ ಸಾಲಿಕೇರಿ ಉಪಸ್ಥಿತರಿದ್ದರು.
ವರದಿ:ಶಿವರಾಜ ಸಾಹುಕಾರ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ