ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನಾದ್ಯಂತ ಭಕ್ತ ಶ್ರೀ ಕನಕದಾಸರ ಜಯಂತಿಯನ್ನು ನವೆಂಬರ್ 30ರಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ವಡಗೇರಾ ತಹಶೀಲ್ದಾರ್ ಶ್ರೀನಿವಾಸ್ ಚಾಪಲ್ ಸೂಚಿಸಿದರು.ವಡಗೇರಾ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಇಂದು ನಡೆದ ಕನಕ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿ ತಹಶೀಲ್ದಾರ್ ಕಚೇರಿಯಲ್ಲಿ ಭಕ್ತ ಕನಕದಾಸರ ಜಯಂತಿ ಆಚರಣೆ ಮಾಡಲು ನಿರ್ಧರಿಸಲಾಗಿದ್ದು ಇದಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ವಹಿಸಿದ ಕೆಲಸ ಕಾರ್ಯಗಳನ್ನು ಹಚ್ಚುಕಟ್ಟಾಗಿ ನೆರವೇರಿಸಲು ಅಧಿಕಾರಿಗಳಿಗೆ ಹೇಳಿದರು ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆ ಅತಿಥಿಗಣ್ಯರು ನುರಿತ ಉಪನ್ಯಾಸಕರನ್ನು ಆಹ್ವಾನಿಸುವುದರ ಜೂತೆಗೆ ಎಲ್ಲಾ ರೀತಿಯ ಸೂಕ್ತ ಸೌಕರ್ಯ ನೀಡಿ ವೇದಿಕೆ ಅಲಂಕಾರ ಕುಡಿಯುವ ನೀರು,ಸ್ವಚ್ಛತೆ ಕಾಪಾಡುವುದು,ತಾಲೂಕು ಮಟ್ಟದಲ್ಲಿ ಎಲ್ಲಾ ಶಾಲೆ ಕಾಲೇಜು ಕಚೇರಿಗಳಲ್ಲಿ ಕಡ್ಡಾಯವಾಗಿ ಶ್ರೀ ಭಕ್ತ ಕನಕದಾಸರ ಜಯಂತಿ ಆಚರಿಸಲು ಸೂಚಿಸಿದರು ಈ ಸಂದರ್ಭದಲ್ಲಿ ಶಿರಸ್ತೆದಾರ ರಾಮುಲು ನಾಯಕ,ಸಂಗೊಳ್ಳಿ ರಾಯಣ್ಣ ಯುವ ಘರ್ಜನೆಯ ವಡಗೇರಾ ತಾಲೂಕ ಅಧ್ಯಕ್ಷ ದೇವು ಎಮ್.ಜಡಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಬಸಣ್ಣಗೌಡ ಜಡಿ,ಸಮಾಜದ ಮುಖಂಡರುಗಳಾದ ತಿಮ್ಮಣ್ಣ ಕಡೆಚೂರ,ಬಸವರಾಜ್ ದೇವದುರ್ಗ,ಭೀಮಣ್ಣ ಬೋದಿನಾಳ್,ಬಸವರಾಜ್ ಡಾವಣ,ಮಲ್ಲು ಜಡಿ,ಚಂದ್ರು ಕಾಡಮನೂರು,ತಹಶೀಲ್ದಾರ್ ಕಾರ್ಯಾಲಯದ ಸಿಬ್ಬಂದಿ ವರ್ಗ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.