ಮೈಸೂರು:ಮೈಸೂರಿನ ಗೌರಿ ಶಂಕರ ನಗರದ ಪಂಚಗವಿ ಮಠದ ಉಳಿವಿಗಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುವುದಾಗಿ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.
500 ವರ್ಷಗಳ ಇತಿಹಾಸ ಪ್ರಸಿದ್ಧ ಮೈಸೂರಿನ ಗೌರಿ ಶಂಕರ ನಗರದ ಪಂಚಗವಿ ಮಠದ ಜವಾಬ್ದಾರಿಯನ್ನು ಭಕ್ತರಿಗೆ ನೀಡಬೇಕೆಂದು ವೀರಶೈವ ಲಿಂಗಾಯತ ಸಮಾಜದ ಯುವ ಮುಖಂಡ ತೇಜಸ್ವಿ ನಾಗಲಿಂಗ ಸ್ವಾಮಿ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
ಸದರಿ ಮಠವು ಚಾಮುಂಡಿ ಬೆಟ್ಟದ ತಪ್ಪಲಿನಲ್ಲೆ ಇದ್ದು ಹಲವಾರು ವಿದ್ಯಾರ್ಥಿಗಳು ಈ ಮಠದಲ್ಲಿ ಆಶ್ರಯ ಪಡೆದುಕೊಂಡು ವ್ಯಾಸಾಂಗ ಮಾಡಿ ಅವರ ಜೀವನವನ್ನು ರೂಪಿಸಿಕೊಂಡಿರುತ್ತಾರೆ.
ಪ್ರಸ್ತುತ ಈ ಮಠದಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಶ್ರಯ ಪಡೆದುಕೊಂಡು ಇರುತ್ತಾರೆ,ಆದರೆ ಕಳೆದ 2-3 ವರ್ಷದ ಹಿಂದೆ ಮೈಸೂರಿನಲ್ಲಿ ಸುರಿದ ಭಾರಿ ಮಳೆಗೆ ಇತಿಹಾಸ ಪ್ರಸಿದ್ಧ ಪಂಚಗವಿ ಮಠದ ಗೋಡೆ ಕುಸಿದಿತ್ತು ಎಂದು ಹೇಳಿದ್ದಾರೆ.
ಆಗಿನ ಮಠದ ಆಡಳಿತಾಧಿಕಾರಿಯಾಗಿ ನೇಮಕವಾಗಿದ್ದ ಕಮಲಾ ಬಾಯಿ ಅವರಿಗೆ ಈ ಕುರಿತು ಮನವಿ ಮಾಡಿದ್ದರೂ ಸಹ ಯಾವುದೇ ಅಭಿವೃದ್ಧಿ ಕಾರ್ಯ ಮಾಡಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.ನಂತರ ದಿನಗಳಲ್ಲಿ ನನ್ನ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹವನ್ನು ಕೂಡ ಮಾಡಲಾಗಿತ್ತು,ಆದರೂ ಕೂಡಾ ಇದುವರೆಗೂ ದುರಸ್ತಿಯಾಗಲಿ ಅಥವಾ ಅಭಿವೃದ್ಧಿ ಕಾರ್ಯ ಮಾಡಿಲ್ಲ ಆದ್ದರಿಂದ ಮಠದ ಭಕ್ತಾದಿಗಳಿಗೆ ಅತೀವ ಬೇಸರ ಉಂಟಾಗಿದೆ ಎಂದು ನಾಗಲಿಂಗಸ್ವಾಮಿ ತಿಳಿಸಿದ್ದಾರೆ.ಸಂಬಂಧ ಪಟ್ಟ ಅಧಿಕಾರಿಗಳು ಪಂಚಗವಿ ಮಠದ ಅಭಿವೃದ್ಧಿ ಕಾಮಗಾರಿ ಮಾಡುವಲ್ಲಿ ವಿಫಲವಾಗಿರುವ ಕಾರಣ ಶ್ರೀಮಠದ ಅಭಿವೃದ್ಧಿಯ ಜವಾಬ್ದಾರಿಯನ್ನು ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಹಾಗೆ ಮಾಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಪಂಚಗವಿ ಮಠದ ಉಳಿವಿಗಾಗಿ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಮಾಡುವುದಾಗಿ ಎಚ್ಚರಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.