ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸಂವಿಧಾನದಲ್ಲಿನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು:ಜಿಲ್ಲಾಧಿಕಾರಿ ಡಾ.ಸುಶೀಲ.ಬಿ

ಯಾದಗಿರಿ:ಸಂವಿಧಾನದಲ್ಲಿನ ಮೌಲ್ಯಗಳು ಜೀವನದ ಮೌಲ್ಯಗಳಾಗಿ ಅಂತರ್ಗತವಾದಾಗ (ಅಳವಡಿಸಿಕೊಂಡಾಗ)ಮಾತ್ರ ಸಂವಿಧಾನ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ ಅವರು ಅಭಿಪ್ರಾಯಪಟ್ಟರು.ಭಾರತದ ಸಂವಿಧಾನ ದಿನಾಚರಣೆ ಪ್ರಯುಕ್ತ ನಗರದಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಹಾಗೂ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.ಸಂವಿಧಾನ ಓದುವುದರ ಜೊತೆಗೆ ಕರ್ತವ್ಯ ಮತ್ತು ಹಕ್ಕುಗಳನ್ನು,ಮೌಲ್ಯಗಳನ್ನು ನಿಷ್ಠೆ, ಪ್ರಾಮಾಣಿಕತೆಯಿಂದ ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಅವರು ನುಡಿದರು.ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರರು ಕೊಟ್ಟ ಸಂವಿಧಾನವು ಶ್ರೇಷ್ಠ ಸಂವಿಧಾನವಾಗಿದ್ದು ನಮ್ಮೆಲ್ಲರಿಗೂ ದಾರಿ ದೀಪವಾಗಿದೆ ಸರ್ವರೂ ಸಂವಿಧಾನ ತೋರಿದ ದಾರಿಯಲ್ಲಿ ನಡೆಯೋಣವೆಂದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರಿಮಾ ಪನ್ವಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತಾ, ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಡಿವೈಎಸ್ಪಿ ಬಸವೇಶ್ವರ,ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್,ನಗರಸಭೆ ಪೌರಾಯುಕ್ತ ಲಕ್ಷ್ಮೀಕಾಂತ,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕು ಸರೋಜಾ,ಸಮಾಜದ ಮುಖಂಡರಾದ ಮುಖಂಡ ಮರೆಪ್ಪ ಚಟ್ಟೇರಕರ್,ನಿಂಗಪ್ಪ ಕೊಲ್ಲೂರಕರ್,ನಗರ ಸಭೆ ಸದಸ್ಯೆ ಬಸಮ್ಮ ಮಹೇಶ್ ಕುರಕುಂಬಳ,ಮಂಜು ದಾಸನಕೇರಿ, ಸಾಮದೇವ ದಾಸನಕೇರಿ,ಹಣಮಂತ ಲಿಂಗೇರಿ, ಮಲ್ಲಣ್ಣ ದಾಸನಕೇರಿ,ಡಾ.ಭಗವಂತ ಅನ್ವಾರ, ಮಲ್ಲಿಕಾರ್ಜುನ ಕುರಕುಂಬಳ,ಗೋಪಾಲ್ ತೆಳಗೇರಿ,ಶರಣು ಎಸ್ ನಾಟೇಕಾರ,ಭೀಮಶಪ್ಪ ಕಾಗಿ,ಮಲ್ಲಿಕಾರ್ಜುನ ಈಟೇ,ಸೈದಪ್ಪ ಸುಂಗಲಕರ್, ಪರಶುರಾಮ ಒಡೆಯರ್,ಮಲ್ಲಿನಾಥ ಸುಂಗಲಕರ್ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿ-ಶಿವರಾಜ ಸಾಹುಕಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ