ಯಾದಗಿರಿ:ಕನ್ನಡ ಜಾನಪದ ಸಂಸ್ಕೃತಿ ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದು ನಗರ ಶಾಸಕರಾದ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರು ಹೇಳಿದರು.
ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಿನ್ನೆ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಉದ್ಘಾಟಿಸಿ,ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.
ಇಂದಿನ ಪಾಶ್ಚಾತ್ಯ ಶೈಲಿಯ ಸಂಗೀತದ ಮಧ್ಯೆ ಜಾನಪದ ಗೀತೆಗಳು ತನ್ನ ಹಿಂದಿನ ವೈಭವವನ್ನು ಸ್ವಲ್ಪ ಮಟ್ಟಿಗೆ ಕಳೆದುಕೊಂಡು,ತನ್ನ ಮೂಲ ನೆಲೆಯಾದ ಹಳ್ಳಿಗಳಲ್ಲಿ ಭದ್ರ ನೆಲೆಯನ್ನು ಉಳಿಸಿಕೊಂಡಿದೆ ಎಂದು ಹೇಳಿದರು.
ಕಂಸಾಳೆ ಪದ,ಗೀಗಿಪದ,ಕೋಲಾಟದ ಪದ,ರಾಗಿ ಬೀಸೋ ಪದ,ಸುಗ್ಗಿ ಹಾಡುಗಳು ಹೀಗೆ ವಿವಿಧ ಬಗೆಯ ಗೀತೆಗಳು ಆಯಾ ಪ್ರದೇಶದ ದೈನಂದಿನ ಚಟುವಟಿಕೆಗಳನ್ನು,ಕೌಟುಂಬಿಕ ಜೀವನ,ಸಂಬಂಧಗಳನ್ನು,ಧೈವಭಕ್ತಿ ಹಾಗೂ ಧಾರ್ಮಿಕ ಆಚರಣೆಗಳನ್ನು ನಮ್ಮ ಮುಂದೆ ತೆರೆದಿಡುತ್ತವೆ ಎಂದು ಹೇಳಿದರು.
ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.ಇಲ್ಲಿಯ ಕಲೆ,ಸಾಹಿತ್ಯ,ಸಂಸ್ಕೃತಿ ಹಾಗೂ ಜಾನಪದ ಸಾಹಿತ್ಯ,ಕಲೆ ಉಳಿಸಿ ಬೆಳೆಸಬೇಕಾಗಿದೆ.ಯುವಸಮೂಹಕ್ಕೆ ಅರಿವು ಮೂಡಿಸುವ ಪ್ರಕ್ರಿಯೆ ನಡೆಯಬೇಕಿದೆ.ದಾಖಲೆ ತೋರಿಸುವದಕ್ಕಿಂತ ಪ್ರಾಯೋಗಿಕವಾಗಿ ಕಾರ್ಯರೂಪಕ್ಕೆ ಇಳಿಸುವುದು ಮುಖ್ಯ ಎಂದು ಹೇಳಿದರು.
ಕರ್ನಾಟಕ ಜಾನಪದ ಸಂಸ್ಕೃತಿ,ವೈವಿಧ್ಯ ತೆ,ಪ್ರಾಚೀನತೆ ಹಾಗೂ ಶ್ರೀಮಂತಿಕೆ ಯನ್ನು ಉಳಿಸಿಕೊಂಡಿದೆ ಡೊಳ್ಳು ಕುಣಿತದಂತಹ ಕಲೆಗಳು ಪುರುಷರಂತೆ ಮಹಿಳೆಯರು ಅಳವಡಿಸಿಕೊಳ್ಳುತ್ತಿರುವುದು ಪ್ರಶಂಸಾರ್ಹ. ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕದ ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಈ ನೃತ್ಯ ಹೆಸರುವಾಸಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಸುಲೈಮಾನ್ ನದಾಫ ಉಪಸ್ಥಿತರಿದ್ದರು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಶ್ರೀ ರಾಜು ಬಾವಿಹಳ್ಳಿ ಸ್ವಾಗತಿಸಿದರು ಉಪನ್ಯಾಸಕರಾದ ಶ್ರೀ ಗುರುಪ್ರಸಾದ್ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.