ಯಾದಗಿರಿ: ಸರಕಾರದ ವಿವಿಧ ಇಲಾಖೆಗಳಿಂದ ಅನುಷ್ಟಾನ ಮಾಡುವ ನಾನಾ ಅಭಿವೃದ್ಧಿ ಕಾಮಗಾರಿಗಳ ನಿರ್ವಹಣೆ ಮಾಡುವಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ವಿಳಂಬ ನೀತಿ ಅನುಸರಿಸಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುತ್ತದೆ ಎಂದು ಯಾದಗಿರಿ ವಿಧಾನಸಭಾ ಮತಕ್ಷೇತ್ರದ ಶಾಸಕ ಚನ್ನಾರೆಡ್ಡಿ
ಪಾಟೀಲ ತುನ್ನೂರ ಎಚ್ಚರಿಕೆ ನೀಡಿದರು. ಅವರು ಯಾದಗಿರಿ ತಾಲೂಕ ಪಂಚಾಯಿತಿ ಸಭಾಂಗಣದಲ್ಲಿ ನ.29ರಂದು ಹಮ್ಮಿಕೊಂಡ ಕರ್ನಾಟಕ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ (ಕೆಡಿಪಿ)ಪರಿಶೀಲನ ಸಭೆಯ
ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಯಾದಗಿರಿ ಮತಕ್ಷೇತ್ರ ವ್ಯಾಪ್ತಿಯ ಪ್ರತಿ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ವಿಶೇಷವಾಗಿ ಜಲ ಜೀವನ್ ಮಿಷನ್ ಅಡಿಯಲ್ಲಿ ನಡೆಯುತ್ತಿರುವ (ಜೆಜೆಎಂ) ಕಾಮಗಾರಿಗಳನ್ನು ವಿಳಂಬ ಮಾಡದೆ, ತೀವ್ರ ಗತಿಯಲ್ಲಿ ನಿರ್ವಾಹಣೆ ಮಾಡಿ ನಿಗದಿತ ಗುರಿಗೆ ಅನುಸಾರ ಪ್ರಗತಿ ಸಾಧಿಸಿ ಗ್ರಾಮೀಣ ಜನರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ
ಇಲಾಖೆಯ ಅಧಿಕಾರಿಗೆ ಸೂಚಿಸಿದರು.
ಗ್ರಾಮಗಳಲ್ಲಿ ವಿದ್ಯುತ್ ತಂತಿಗಳು ಹಳೆಯದಾಗಿದ್ದು, ಕಡಿದು ಬೀಳುವ ಸಂಭವ ಇರುವಲ್ಲಿ ದುರಸ್ತಿ ಮಾಡಲು ಹಾಗೂ ಕೆಟ್ಟು ಹೊದ ಟ್ರಾನ್ಸ್ ಪಾರ್ಮ ಗಳನ್ನು ಶೀಘ್ರದಲ್ಲೇ ಬದಲಾವಣೆ ಮಾಡಿ ಎಂದು ಜೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.
ಪ್ರತಿ ಗ್ರಾಮದಲ್ಲಿ ರೈತರ ಸಭೆಗಳು ಮಾಡಿ ಕೃಷಿ ಇಲಾಖೆಯಿಂದ ವಿವಿಧ ಯೋಜನೆಗಳಲ್ಲಿ ಸಿಗುವ ಸೌಲಭ್ಯಗಳ ಕುರಿತು ರೈತರಿಗೆ ಮಾಹಿತಿ ನೀಡಿ, ತೋಟಗಾರಿಕೆ ಬೆಳೆ ಪ್ರದೇಶದ ವಿಸ್ತಣೆ ಮಾಡಲು ಹಾಗೂ ಹೆಚ್ಚು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರ ಮನವೊಲಿಸುವ ತೋಟಗಾರಿಕೆ ಬೆಳೆಗಳ ಲಾಭದ ಕುರಿತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರಲ್ಲಿ ಜಾಗೃತಿ ಎಂದರು.
ಸರಕಾರ ಹಲವು ಜನಪರ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಯೋಜನೆಗಳನ್ನು ಅನುಷ್ಟಾನ ಮಾಡುತ್ತಿದ್ದು, ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ವಿವಿಧ ಯೋಜನೆಗಳಲ್ಲಿ ಜನರಿಗೆ ಸಿಗುವ ಸೌಲಭ್ಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ. ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗೆ ನೀಡಿ, ಯೋಜನೆಗಳ ಯಶಸ್ವಿಗೆ ಸಹಕರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ವೇಳೆ ಯಾದಗಿರಿ, ಶಹಾಪುರ, ವಡಗೇರಾ, ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಶರಬೈ, ಸೋಮಶೇಖರ ಬಿರಾದಾರ,ಮಲ್ಲಿಕಾರ್ಜುನ ಸಂಗ್ವಾರ, ತಾಲೂಕ ಯೋಜನಾಧಿಕಾರಿ ಶಶಿಧರ ಹಿರೇಮಠ, ಸಹಾಯಕ ನಿರ್ದೇಶಕರಾದ ವಿಜಯಲಕ್ಷ್ಮಿ ಶಾಬಾದಿ, ವಿಷಯ ನಿರ್ವಾಹಕರಾದ ಅನಸರ್ ಪಟೇಲ್ ಸೇರಿದಂತೆ ತಾಲೂಕ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕ ಪಂಚಾಯತ ಸಿಬ್ಬಂಧಿ ಇದ್ದರು.
ವರದಿ :- ಶಿವರಾಜ ಸಾಹುಕಾರ ವಡಗೇರಾ