ಭದ್ರಾವತಿ:ವಕೀಲರೊಬ್ಬರ ಮೇಲೆ ಚಿಕ್ಕಮಗಳೂರು ಪೊಲೀಸರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಭದ್ರಾವತಿ ತಾಲ್ಲೂಕು ವಕೀಲರ ಸಂಘದ ವತಿಯಿಂದ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ವಕೀಲರ ರಕ್ಷಣೆಗೆ ಪ್ರತ್ಯೇಕ ಕಾಯ್ದೆ ರಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿ ರಂಗಪ್ಪ ವೃತ್ತದಲ್ಲಿ ರಸ್ತೆ ತಡೆ ನಡೆಸಿದ ನಂತರ ತಾಲ್ಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ತಹಶೀಲ್ದಾರ್ ಗ್ರೇಡ್ 2 ರಂಗಮ್ಮ ರವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ವಕೀಲರ ಸಂಘದ ಅಧ್ಯಕ್ಷ ಉಮೇಶ್ ರವರ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ವಕೀಲ ಸಮೂಹದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ವರದಿ:ಕೆ ಆರ್ ಶಂಕರ್,ಭದ್ರಾವತಿ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.