ಭದ್ರಾವತಿ:”ಸಮುದಾಯಗಳು ಮುನ್ನೆಡೆಸಲಿ” ಎಂಬ ಈ ವರ್ಷದ ಘೋಷವಾಕ್ಯದೊಂದಿಗೆ ಸಂಘಸಂಸ್ಥೆಗಳು ಹಾಗೂ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಹೆಚ್.ಐ.ವಿ./ಏಡ್ಸ್ ನಿಯಂತ್ರಣ ಮಾಡಲು ಬಹುಮುಖ್ಯ ಎಂದು ಭದ್ರಾವತಿ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಶಿವಪ್ರಕಾಶ್ ತಿಳಿಸಿದರು.
ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ,ಐ.ಸಿ.ಟಿ.ಸಿ ವಿಭಾಗ,ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ,ರೋಟರಿ ಕ್ಲಬ್,ಬೊಮ್ಮನಕಟ್ಟೆಯ ಸರ್. ಎಂ.ವಿಶ್ವೇಶ್ವರಾಯ ವಿಜ್ಞಾನ ಕಾಲೇಜು,ಎನ್. ಎಸ್.ಎಸ್. ಮತ್ತು ರೆಡ್ ರಿಬ್ಬನ್ ಕ್ಲಬ್ ಸಹಯೋಗದಲ್ಲಿ ಬೊಮ್ಮನಕಟ್ಟೆ ಕಾಲೇಜಿನ ಸಭಾಂಗಣದಲ್ಲಿ ವಿಶ್ವಏಡ್ಸ್ ದಿನ 2023 ರ ಪ್ರಯುಕ್ತ ಜಾಗೃತಿ ಕಾರ್ಯಕ್ರಮ ಹಾಗೂ ಕಾಲ್ನಡಿಗೆ ಮೂಲಕ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಯುವಜನತೆ ಅರಿವು ಹಾಗೂ ಜಾಗೃತಿವಹಿಸಿ ವಿವಾಹದ ಮೊದಲು ನಂತರ ಸಂಯಮ ಕಾಪಾಡಿಕೊಳ್ಳುವುದು ಅತ್ಯಾವಶ್ಯಕ.ಅಚ್ಚೆ ಹಾಕಿಸಿಕೊಳ್ಳುವಾಗ ಸುರಕ್ಷತಾ ಕ್ರಮ ವಹಿಸಬೇಕು ಎಂದು ಮಾಹಿತಿ ನೀಡಿ,ಈ ಜಾಗೃತಿ ಕಾರ್ಯಕ್ರಮದ ಸದುಪಯೋಗ ಪಡೆಯಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ರೋಟರಿ ಕ್ಲಬ್ ಅಧ್ಯಕ್ಷ ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಿದರು ಕಾರ್ಯಕ್ರಮದಲ್ಲಿ ಉಪನ್ಯಾಸಕ ಡಾ.ಸಿದ್ದೇಗೌಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಾರ್ವನಿಕ ಅಸ್ಪತ್ರೆಯ ದಂತ ವೈದ್ಯೆಯರುಗಳಾದ ಡಾ.ಮಯೂರಿ,ಡಾ.ರಶ್ಮಿ, ಕಾಲೇಜಿನ ಎನ್.ಎಸ್.ಎಸ್.ಅಧಿಕಾರಿ ಡಾ. ಅರಸಯ್ಯ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಂತರ ಬೊಮ್ಮನಕಟ್ಟೆ ಮುಖ್ಯ ರಸೆಯಲ್ಲಿ ಕಾಲ್ನಡಿಗೆ ಮೂಲಕ ಜಾಗೃತಿ ಜಾಥಾ ನಡೆಸಿ,ಹೆಚ್.ಐ.ವಿ/ಏಡ್ಸ್ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.
ವರದಿ:ಕೆ ಆರ್ ಶಂಕರ್,ಭದ್ರಾವತಿ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.