ಕಲಬುರಗಿ:ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಲಭ್ಯವಿರುವ ಅನುದಾನದಲ್ಲಿ ಶೇಕಡಾ ಐದರಷ್ಟು ಅನುದಾನವನ್ನು ಅಂಗವಿಕಲರಿಗಾಗಿಯೇ ಮೀಸಲಿರುತ್ತದೆ ಆ ಅನುದಾನವನ್ನು ಅಂಗವಿಕಲರ ಅಭಿವೃದ್ಧಿ ಕೆಲಸಗಳನ್ನು ಹೊರತುಪಡಿಸಿ ಬೇರೆ ಯಾವುದೆ ಯೋಜನೆಗಳಿಗಾಗಿ ಬಳಸಿಕೊಳ್ಳುವಂತಿಲ್ಲ ಆದರೆ ಕೆಲವೊಂದು ಪಂಚಾಯಿತಿಗಳಲ್ಲಿ ಅಂಗವಿಕಲರಿಗಾಗಿ ಮೀಸಲು ಅನುದಾನವನ್ನು ದುರ್ಬಳಕೆ ಮಾಡುತ್ತಿರುವುದು ಕಂಡುಬಂದಿರುತ್ತದೆ.
ಆದ್ದರಿಂದ ಗ್ರಾಮ ಹಾಗೂ ತಾಲೂಕು ಮತ್ತು ಜಿಲ್ಲೆಯಲ್ಲಿರುವಂತ ಎಲ್ಲಾ ವಿಕಲಚೇತನರು ತಮ್ಮ ತಮ್ಮ ಹತ್ತಿರದ ಪಂಚಾಯತಿಗಳಿಗೆ ಭೇಟಿ ನೀಡಿ ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕನಕ ಕಲ್ಯಾಣ ಕಾರ್ಮಿಕ ಸಂಘಟನಾ ಯುವ ಘಟಕದ ರಾಜ್ಯಾಧ್ಯಕ್ಷರು ಮಲ್ಲಣ್ಣ ಎಂ ಪೂಜಾರಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.