ಹನೂರು:ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಚಾಮರಾಜನಗರ ಜಿಲ್ಲೆ ಕ್ಷೆತ್ರ ಶಿಕ್ಷಣಧಿಕಾರಿಗಳ ಕಚೇರಿ ಶಾಲಾ ಶಿಕ್ಷಣ ಇಲಾಖೆ ಹನೂರು ತಾಲೂಕು ವತಿಯಿಂದ 2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತರುವ ನಿಟ್ಟಿನಲ್ಲಿ ಜಿಲ್ಲಾ ಶಿಕ್ಷಣ ಇಲಾಖೆ ಮಕ್ಕಳಲ್ಲಿ ಭರವಸೆ ತುಂಬುವ ಕಾರ್ಯಕ್ರಮವನ್ನು ರಾಮಾಪುರದ ಜೆ ಎಸ್ ಎಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಶಾಸಕ ಎಂಆರ್ ಮಂಜುನಾಥ್ ಅವರು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಣ ಇಲಾಖೆಯಿಂದ ಓದುವ ಮಕ್ಕಳಿಗೆ ತುಂಬಾ ಪ್ರೋತ್ಸಾಹ ನೀಡುತ್ತಿದ್ದಾರೆ ಎಲ್ಲಾ ರೀತಿಯಲ್ಲೂ ಶಿಕ್ಷಣ ಕುರಿತ ವಿಚಾರವಾಗಿ ಕ್ಷೇತ್ರದಲ್ಲಿ ಹೆಚ್ಚಿನ ಆದ್ಯತೆ ಕೊಟ್ಟು ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ ಹಾಗಾಗಿ ಮಕ್ಕಳು ಇದನ್ನು ಮನಸ್ಸಿನಲ್ಲಿಟ್ಟುಕೊಂಡು ಉನ್ನತ ಮಟ್ಟದ ಶ್ರೇಣಿಯಲ್ಲಿ ಉತ್ತೀರ್ಣರಾಗಿ ತಂದೆ ತಾಯಿಗೆ ಮತ್ತು ನಾಡಿಗೆ ಕೀರ್ತಿ ತರುವಂತವರಾಗಿ ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳ ಸತತ ಪ್ರಯತ್ನದಿಂದ ಮಾತ್ರ ಸಾಧನೆ ಸಾಧ್ಯ ಆಗಾಗಿ ಮಕ್ಕಳು ವಿದ್ಯೆಗೆ ಹೆಚ್ಚಿನ ಆಸಕ್ತಿತಿಂದ ಅಧ್ಯಯನ ಮಾಡುವ ಮೂಲಕ ತಮ್ಮ ಗುರಿ ಮುಟ್ಟ ಬೇಕು ಆ ಮೂಲಕ ನಿಮ್ಮ ತಂದೆ ತಾಯಿ ಮತ್ತು ಗುರುಗಳ ಮಾರ್ಗದರ್ಶನ ಮತ್ತು ಅವರ ರಾಜ್ಯಕ್ಕೆ ಮತ್ತು ತಾಲೂಕಿಗೆ ಕೀರ್ತಿ ತರಬೇಕು ಎಂದು ತಿಳಿಸಿದರು.
ವೇದಿಕೆ ಕುರಿತು ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ರಾಮಚಂದ್ರ ರಾಜೇ ಅರಸ್ ಅವರು ಮಕ್ಕಳನ್ನು ಕುರಿತು ಉತ್ತಮ ವಿದ್ಯಾಭ್ಯಾಸ ಪಡೆದುಕೊಳ್ಳಲು ಸಲಹೆ ನೀಡುತ್ತಾ ಮಕ್ಕಳಿಗೆ ಚೈತನ್ಯ ತುಂಬುತ್ತಾ ಪರೀಕ್ಷೆಯನ್ನು ಯಾವುದೇ ಭಯವಿಲ್ಲದ್ದೆ ಮಕ್ಕಳು ಎದುರಿಸಿ ನಿಮಗೆ ಎಲ್ಲಾ ಶಿಕ್ಷಕರ ಪ್ರೋತ್ಸಾಹ ಇರುತ್ತದೆ ಎಂದು ಮಕ್ಕಳಿಗೆ ಶಿಕ್ಷಕಣದ ಕುರಿತು ಸವಿವರವಾಗಿ ವಿಚಾರ ಮಂಡನೆ ಮಾಡಿದರು.
ಈ ಸಂದರ್ಭದಲ್ಲಿ ಉಪನಿರ್ದೇಶಕರಾದ ರಾಮಚಂದ್ರ ರಾಜೆ ಅರಸ್ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು,ಜಿಲ್ಲಾ ಆರೋಗ್ಯ ಅಧಿಕಾರಿ ಚಿದಂಬರಂ, ತಾಲೂಕು ಪ್ರೌಢಶಾಲೆಯ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಅಮಲ್ ದಾಸ್ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಧ್ಯಕ್ಷ ಅಶೋಕ್ ಸೇರಿದಂತೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ನಿಯರು ಹಾಗೂ ಇತರರು ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.