ಕಲಬುರಗಿ:ಕರ್ನಾಟಕ ರಾಜ್ಯದಲ್ಲಿ ಬರಗಾಲದ ಬವಣೆಯಿಂದ ರಾಜ್ಯದಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ ಅಷ್ಟೇ ಅಲ್ಲದೆ ಸಹಕಾರಿ ಬ್ಯಾಂಕುಗಳಲ್ಲಿ ಹಾಗೂ ಸರ್ಕಾರಿ ಬ್ಯಾಂಕುಗಳಲ್ಲಿ ಸಾಲ ಮಾಡಿ ನಾಡಿನ ರೈತರು ನಷ್ಟ ಅನುಭವಿಸಿದ್ದಾರೆ ಆದ ಕಾರಣ ಕೇವಲ ಬೆಳೆ ಪರಿಹಾರ ಧನ ವಿತರಣೆಯಿಂದ ಸಂಕಷ್ಟದಲ್ಲಿರುವ ರಾಜ್ಯದ ಎಲ್ಲಾ ರೈತರ ಸಮಸ್ಯೆ ಪರಿಹಾರವಾಗುವುದಿಲ್ಲ ಹಾಗೂ ಕರ್ನಾಟಕ ರಾಜ್ಯದಲ್ಲಿ ರೈತರ ಹೆಸರಿನಲ್ಲಿ ರಾಜಕೀಯಕ್ಕೆ ಬಂದ ರಾಜ್ಯ ಸರ್ಕಾರ ರೈತರ ಸಂಕಷ್ಟಗಳಿಗೆ ಸ್ಪಂದಿಸಬೇಕಿದೆ ಹಾಗೂ ಖಾಸಗಿ ಬ್ಯಾಂಕುಗಳಲ್ಲಿ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಮಾಡಿರುವ ದೀರ್ಘಾವಧಿ ಅಲ್ಪಾವಧಿಯ ಸಂಪೂರ್ಣ ಸಾಲವನ್ನು ಈ ಕೂಡಲೇ ಮನ್ನ ಮಾಡಲೆಬೇಕು ಇದರಿಂದ ಬರಗಾಲದ ಛಾಯೆಯಿಂದ ತತ್ತರಿಸಿದ ನಮ್ಮ ನಾಡಿನ ರೈತರಿಗೆ ಅಲ್ಪ ಪ್ರಮಾಣದಲ್ಲಿ ಅನುಕೂಲವಾಗಬಹುದು ಹಾಗೂ ಅಸಹಾಯಕತೆಯಿಂದ ನಷ್ಟದಿಂದ ನರಳುತ್ತಿರುವ ರೈತರಿಗೆ ನೆರವಾಗಬಹುದು ಆದ್ದರಿಂದ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ರಾಜ್ಯದ ಎಲ್ಲಾ ರೈತರ ಸಂಪೂರ್ಣ ಸಾಲವನ್ನು ಮನ್ನ ಮಾಡುವಂತೆ ಪತ್ರಿಕಾ ಪ್ರಕಟಣೆಯ ಮೂಲಕ ಹಾಲುಮತ ಸಮುದಾಯದ ಯುವ ಮುಖಂಡ ದೇವರಾಜ್ ಪೂಜಾರಿ ಟಾಕೀನ (ಜಮಖಂಡಿ) ಅವರು ಪತ್ರಿಕಾ ಪ್ರಕಟಣೆಯ ಮೂಲಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.